ಆ.25 ರಂದು ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಬೊಮ್ಮನಳ್ಳಿಕರ್
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಆ.25 ರಂದು ಪಟ್ಟಣದ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ರೀಡಾಂಗಣ ವ್ಯವಸ್ಥಾಪಕ ಮರಿಯಪ್ಪ ಬೊಮ್ಮನಳ್ಳಿಕರ್ ತಿಳಿಸಿದ್ದಾರೆ.
ಸದರಿ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟಬಾಲ್, ಖೋಖೋ, ಕಬಡ್ಡಿ, ಥ್ರೋಬಾಲ್, ಯೋಗಾ, ಪುರುಷ ಮತ್ತು ಮಹಿಳೆಯರಿಗೆ ಪುಟಬಾಲ್ ಪುರುಷರಿಗೆ ಮಾತ್ರ ಕ್ರೀಡೆಗಳನ್ನು ಆಯೋಜಿಸಲಾಗಿದೆ
ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಸ್ವ-ಇಚ್ಚೆಯಿಂದ ಭಾಗವಹಿಸಬಹುದಾಗಿರುತ್ತದೆ. ಕರ್ನಾಟಕದ ನಿವಾಸಿಗಳಾಗಿರಬೇಕು, ರಕ್ಷಣಾ ಪಡೆ, ಅರೆ ರಕ್ಷಣಾ ಪಡೆಗೆ ಸೇರಿದ ಕ್ರೀಡಾಪಟುಗಳಾಗಿರಬಾರದು, ಒಬ್ಬ ಕ್ರೀಡಾಪಟು ಅಥವಾ ತಂಡ ಒಂದು ಬಾರಿ ತಾಲೂಕು/ಜಿಲ್ಲಾ ಕ್ರೀಡಾಕೂಟದಲ್ಲಿ ಭಾಗವಹಿಸಿದರೆ ಬೇರೆ ತಾಲೂಕು/ಜಿಲ್ಲಾ ಕ್ರೀಡಾಕೂಟದಲ್ಲಿ ಭಾಗವಹಿಸುವಂತಿಲ್ಲ. ಈ ಕ್ರೀಡಾಕೂಟದಲ್ಲಿ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಮತ್ತು ದ್ವೀತಿಯ ಗುಂಪು ಕ್ರೀಡೆಯಲ್ಲಿ ಪ್ರಥಮ ತಂಡಗಳು ಜಿಲ್ಲಾ ಮಟ್ಟಕ್ಕೆ ಅರ್ಹರಿರುತ್ತಾರೆ. ತೀರ್ಪುಗಾರರ ತಿರ್ಮಾನವೇ ಅಂತಿಮವಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ಮರಿಯಪ್ಪ ತಾಲೂಕು ಕ್ರೀಡಾಂಗಣ ವ್ಯವಸ್ಥಾಪಕರು ಮೊ.ನಂ:9945230160 ರವರನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

