Oplus_0

ಬೆಂಗಳೂರಿನಲ್ಲಿ ನಾಳೆ ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ಬೃಹತ್ ಪ್ರತಿಭಟನೆ, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲು ಡಿಕೆಶಿ ಮನವಿ 

ನಾಗಾವಿ ಎಕ್ಸಪ್ರೆಸ್

ಬೆಂಗಳೂರು: ಮತದಾರ ಪಟ್ಟಿಯಲ್ಲಿ ನೆಡೆಯುತ್ತಿರುವ ಅಕ್ರಮದ ಬಗ್ಗೆ ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ಬೃಹತ್ ಪ್ರತಿಭಟನೆ ಫ್ರೀಡಂ ಪಾರ್ಕ್’ನಲ್ಲಿ ಆಗಸ್ಟ್ 8 ರಂದು ಹಮ್ಮಿಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರು ಹಾಗೂ ದೇಶದ ಇತರೆಡೆಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಅನೇಕ ಅಕ್ರಮಗಳು ನಡೆಯುತ್ತಿದ್ದು, ಇದರ ಬಗ್ಗೆ ಲೋಕಸಭೆಯಲ್ಲಿ ವಿರೋಧ ಪಕ್ಕದ ನಾಯಕ ರಾಹುಲ್ ಗಾಂಧಿ ರವರು ಪ್ರಸ್ತಾಪ ಮಾಡಿರುತ್ತಾರೆ. ಈ ಅಕ್ರಮದ ಬಗ್ಗೆ ಆ.8 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ಲ್ಲಿ ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ಎಂಬುದಾಗಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಇದರಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಈ ಪ್ರತಿಭಟನೆಯನ್ನು ಯಶಸ್ವಿಗೊಳಿಸಲು ಎಲ್ಲಾ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು, 2023/2024ರ ಅಭ್ಯರ್ಥಿಗಳು, ಮಾಜಿ ಸಂಸದರು, ಮಾಜಿ ಶಾಸಕರು, ಡಿಸಿಸಿ/ಬಿಸಿಸಿ ಅಧ್ಯಕ್ಷರು, ಕೆಪಿಸಿಸಿ ಸದಸ್ಯರು, ಮುಂಚೂಣಿ ಘಟಕ, ಸೆಲ್, ವಿಭಾಗಳ ಮುಖ್ಯಸ್ಥರು, ಸ್ಥಳೀಯ ಸಂಸ್ಥೆಯ ಸದಸ್ಯರು ಹಾಗೂ ಮಾಜಿ ಸದಸ್ಯರು ತಮ್ಮ ಜಿಲ್ಲಾ/ತಾಲೂಕು ವ್ಯಾಪ್ತಿಯಲ್ಲಿ ಸ್ಥಳೀಯ ಮುಖಂಡರುಗಳೊಂದಿಗೆ ಚರ್ಚಿಸಿ ಈ ಪ್ರತಿಭಟನೆಯ ಮಾಹಿತಿಯನ್ನು ತಿಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲಾ ಹಂತದ ಮುಖಂಡರುಗಳು ಭಾಗವಹಿಸಿ ಯಶಸ್ವಿಗೊಳಿಸಲು ಸಹಕರಿಸಬೇಕು ಎಂದು ಕೋರಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!