Oplus_0

ಬಸವ ಜಯಂತಿಯ ಆಹ್ವಾನ ಪತ್ರಿಕೆಯಲ್ಲಿ ಅವಮಾನಿಸಿದ ವಾಡಿ ಪುರಸಭೆ ನಡೆಗೆ ಬಿಜೆಪಿ ಖಂಡನೆ

ನಾಗಾವಿ ಎಕ್ಸಪ್ರೆಸ್ 

ವಾಡಿ: ಪಟ್ಟಣದ ಪುರಸಭೆ ಆಡಳಿತ ಮಂಡಳಿ ಬಸವ ಜಯಂತಿಯ ಆಹ್ವಾನ ಪತ್ರಿಕೆಯಲ್ಲಿ ಸಾಂಸ್ಕೃತಿಕ ನಾಯಕ ಬದಲು ಸಂಕೃತಿಕ ನಾಯಕ ಎಂದು ಉಲ್ಲೇಖಿಸಿ ಸಮಾಜದ ಸುಧಾರಕ ಬಸವಣ್ಣ ಅವರಿಗೆ ಅವಮಾನಿಸಿದೆ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಸಮಾಜ ಸುಧಾರಕರ ಹೆಸರುಗಳನ್ನು ತಪ್ಪಾಗಿ ಉಲ್ಲೇಖಿಸಿ, ಅವರ ಸಾಮಾಜಿಕ, ಸಾಂಸ್ಕೃತಿಕ ಹೋರಾಟಕ್ಕೆ ಮಾಡುವ ದೊಡ್ಡ ಅಪಮಾನ ಇದಾಗಿದೆ ಎಂದಿದ್ದಾರೆ.

ಬಸವಣ್ಣನವರು 12ನೇ ಶತಮಾನದಲ್ಲಿ ಕರ್ನಾಟಕದಲ್ಲಿ ನಡೆಸಿದ ಸಾಂಸ್ಕೃತಿಕ ಮತ್ತು ಸಾಮಾಜಿಕ ಕ್ರಾಂತಿಯು ಭಾರತದ ಇತಿಹಾಸದಲ್ಲೇ ಅತ್ಯಂತ ಪ್ರಮುಖವಾದ ಸುಧಾರಣಾ ಚಳುವಳಿಯಾಗಿದೆ. ಕಲ್ಯಾಣ ಕ್ರಾಂತಿ ಎಂದೂ ಕರೆಯಲ್ಪಡುವ ಈ ಚಳುವಳಿಯು ಜಾತಿ, ಲಿಂಗ ಮತ್ತು ಆರ್ಥಿಕ ತಾರತಮ್ಯದ ವಿರುದ್ಧ ಧ್ವನಿ ಎತ್ತಿತ್ತು.

ಅದಕ್ಕಾಗಿ ಕರ್ನಾಟಕ ಸರ್ಕಾರವು ಬಸವಣ್ಣನವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಅಧಿಕೃತವಾಗಿ ಘೋಷಿಸಿ, 13 ಫೆಬ್ರವರಿ 2024 ರಂದು ವಿಧಾನಸೌಧದಲ್ಲಿ ಅವರ ಭಾವಚಿತ್ರವನ್ನು ಅನಾವರಣಗೊಳಿಸಲಾಗಿದೆ.

ಅಧಿಕಾರಿಗಳು ಪ್ರಕಟಣೆ, ಆಹ್ವಾನ ನೀಡುವ ಸಂದರ್ಭದಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಇದನ್ನು ಅನೇಕ ಸಲ ಗಮನಕ್ಕೆ ತಂದರೂ ಸಹ ಮುಂದುವರೆಸುತ್ತಿರುವುದು ಯಾಕೆ ಅಂತ ಗೊತ್ತಾಗುತ್ತಿಲ್ಲ, ಇದರ ವಿರುದ್ಧ ಮೇಲಾಧಿಕಾರಿಗಳಿಗೆ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!