Oplus_131072

ಕಲಬುರಗಿ ಬಸವ ಜಯಂತಿ ಹಿನ್ನೆಲೆ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ನಾಗಾವಿ ಎಕ್ಸಪ್ರೆಸ್ 

ಕಲಬುರಗಿ: ಏ.30 ರಂದು ಬಸವ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಏ.30ರ ಬೆಳಗಿನ 6 ಗಂಟೆಯಿಂದ ಮೇ.1ರ ಬೆಳಗಿನ 6 ಗಂಟೆಯವರೆಗೆ ಎಲ್ಲಾ ತರಹದ ಮದ್ಯ ಮಾರಾಟ, ಸಾಗಾಟ ಹಾಗೂ ಮದ್ಯಪಾನವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ ಬಿ.ಫೌಝಿಯಾ ತರನ್ನುಮ್ ಅವರು ಆದೇಶ ಹೊರಡಿಸಿದ್ದಾರೆ.

ಕಲಬುರಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಎಲ್ಲಾ ತರಹದ ಮದ್ಯಪಾನ, ಸರಾಯಿ, ಶೆಂಧಿ, ಸ್ವದೇಶಿ ಹಾಗೂ ವಿದೇಶಿ ಮದ್ಯಪಾನ ಮತ್ತು ಮಾದಕ ವಸ್ತುಗಳ ಮಾರಾಟ, ಸಾಗಾಟ ಹಾಗೂ ಮದ್ಯಪಾನವನ್ನು ನಿಷೇಧಿಸಿ, ಅಂಗಡಿಗಳನ್ನು ಮುಚ್ಚುವಂತೆ ಅವರು ಆದೇಶ ಹೊರಡಿಸಿದ್ದಾರೆ.

ಈ ಸಂದರ್ಭದಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಅನ್ವಯ ಈ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!