Oplus_0

ಬೆಳಗಾವಿ ಸುವರ್ಣ ಸೌಧ ಎದುರು ರೈತ ಸಂಘದ ಪ್ರತಿಭಟನೆ, ಕೃಷಿ ಸಚಿವ ಚೆಲುವನಾರಾಯಣ ಸ್ವಾಮಿ ಭೇಟಿ 

ನಾಗಾವಿ ಎಕ್ಸಪ್ರೆಸ್

ಬೆಳಗಾವಿ: ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು, ರೈತರ ಪಂಪಸೆಟ್‌ಗಳಿಗೆ ಉಚಿತ ವಿದ್ಯುತ್ ಪರಿಕರಗಳನ್ನು ಮೊದಲಿನಂತೆ ವೀತರಿಸಬೇಕೆಂಬ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಬೆಳಗಾವಿ ಸುವರ್ಣ ಸೌಧ ಎದುರು ಮಂಗಳವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕೃಷಿ ಸಚಿವ ಚೆಲುವನಾರಾಯಣ ಸ್ವಾಮಿ ಅವರು ಮನವಿ ಪತ್ರ ಸ್ವೀಕರಿಸಿದರು.

ರಾಜ್ಯಾಧ್ಯಕ್ಷ ಡಾ. ವಾಸುದೇವ ಮೇಟಿ ಮಾತನಾಡಿ, ರೈತರ ಬೆಳೆಗೆ ಸರ್ಕಾರ ಕಾನೂನಾತ್ಮಕ ಬೆಲೆ ನಿಗದಿ ಪಡಿಸಬೇಕು, ಕಳಸಾ-ಬಂಡೂರಿ ನಾಲಾ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಗದಗ ಜಿಲ್ಲಾಧ್ಯಕ್ಷ ನಟರಾಜ ಸವಡಿ, ಕಲಬುರಗಿ ಜಿಲ್ಲಾಧ್ಯಕ್ಷ ಪ್ರಶಾಂತಗೌಡ ಪಾಟೀಲ, ಚಿತ್ತಾಪುರ ತಾಲೂಕು ಅಧ್ಯಕ್ಷ ಮೌನೇಶ್ ಭಂಕಲಗಿ, ನರಗುಂದ ತಾಲೂಕು ಅಧ್ಯಕ್ಷ ಉಮೇಶ್ ಮರ್ಚಪ್ಪನವರ್, ಸೇರಿದಂತೆ ನೂರಾರು ರೈತ ಮುಖಂಡರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!