ಬೆಳೆ ವಿಮೆ ಪರಿಹಾರ ರೂ. 585.72 ಕೋಟಿ ಮಂಜೂರು: ಸಚಿವ ಪ್ರಿಯಾಂಕ್ ಖರ್ಗೆ
ನಾಗಾವಿ ಎಕ್ಸಪ್ರೆಸ್
ಬೆಂಗಳೂರು: 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಒಟ್ಟು 3,00,952 ರೈತರು ಬೆಳೆ ವಿಮೆ ನೋಂದಣಿ ಮಾಡಿಸಿರುತ್ತಾರೆ. ಸರ್ಕಾರದಿಂದ ರೂ 585.72 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, 2,87,696 ರೈತರಿಗೆ ಒಟ್ಟು 243.52 ಕೋಟಿ ಬೆಳೆ ವಿಮೆ ಪರಿಹಾರದ ಮೊದಲನೆಯ ಕಂತನ್ನು ಈಗಾಗಲೆ ಜಮೆ ಮಾಡಲಾಗಿದೆ (ಬೆಳೆ ಮಧ್ಯಂತರ ಪರಿಹಾರ- (Mid-Season Adversity). ಜಿಲ್ಲೆಯ 2,67,133 ರೈತರಿಗೆ ರೂ 234.73 ಕೋಟಿ ಹಾಗೂ ಸ್ಥಳೀಯ ವಿಕೋಪದಡಿ (Localized calamity) 20,563 ರೈತರಿಗೆ ರೂ 8.79 ಕೋಟಿ ಜಮೆ ಆಗಿರುತ್ತದೆ. ಎರಡನೆಯ ಕಂತು ರೂ 221 ಕೋಟಿ ಅನುದಾನ ರೂ 54 ಕೋಟಿ ಬಿಡುಗಡೆಯಾಗಿದ್ದು ಕೆಲವೇ ದಿನಗಳಲ್ಲಿ ರೈತರ ಖಾತೆಗೆ ಜಮೆಯಾಗಲಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬಾಕಿ ಮೊತ್ತ ಇನ್ನುಳಿದ ರೂ 67 ಕೋಟಿ ಕೆಲವೇ ದಿನಗಳಲ್ಲಿ ಜಮೆ ಮಾಡಲು ಕ್ರಮ ಜರುಗಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.
ಬೆಳೆ ಹಾನಿ ಪರಿಹಾರ: 2025-26 ನೇ ಸಾಲಿನ ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಹೆಚ್ಚಿನ ಮಳೆಯಿಂದಾಗಿ ಅತಿವೃಷ್ಟಿಯಿಂದ 3.24 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿತ್ತು. ಹಾಗೆ, ಬೆಳೆ ಹಾನಿಯಾದ 3,26,183 ರೈತರಿಗೆ ಒಟ್ಟು ರೂ 498.73 ಕೋಟಿ ಬೆಳೆ ಹಾನಿ ಪರಿಹಾರವನ್ನು DBT (ನೇರ ನಗದು ವರ್ಗಾವಣೆ) ಮೂಲಕ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಎನ್ ಡಿ ಆರ್ ಎಫ್ ಹಾಗೂ ಎಸ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ರೂ 250 ಕೋಟಿ ಹಾಗೂ ರಾಜ್ಯ ಸರ್ಕಾರದಿಂದ ವಿಶೇಷ ಪ್ಯಾಕೇಜ್ ನಡಿ (STATE TOPUP) ರೂ 248.73 ಕೋಟಿ ಬೆಳೆ ಹಾನಿ ಪರಿಹಾರ ಜಮೆಯಾಗಿದೆ ಎಂದು ವಿವರಿಸಿದ್ದಾರೆ.
ಕಲಬುರಗಿ ಜಿಲ್ಲೆಯ ರೈತರಿಗೆ 2025-26 ನೇ ಸಾಲಿನಲ್ಲಿ ಎನ್ ಡಿ ಆರ್ ಎಫ್ ಹಾಗೂ ಎಸ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ರೂ 250 ಕೋಟಿ, ರಾಜ್ಯ ಸರ್ಕಾರದ ವಿಶೇಷ ಪ್ಯಾಕೇಜ್ ನಡಿ ರೂ 248.73 ಕೋಟಿ ಹಾಗೂ ಬೆಳೆ ವಿಮೆ ಪರಿಹಾರವಾಗಿ ರೂ 585.72 ಕೋಟಿ ಹೀಗೆ ಒಟ್ಟು ರೂ 1084.45 ಪರಿಹಾರ ಬಿಡುಗಡೆಗೆ ಕ್ರಮವಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

