ಬೆಳೆಹಾನಿ ಮೊದಲನೇ ಹಂತದ 250.97 ಕೋಟಿ ಹಣ ಮಂಜೂರಾತಿ: ಪ್ರಿಯಾಂಕ್ ಖರ್ಗೆ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆ ಹಾಗೂ ಪ್ರವಾಹದಿಂದ ಹಾನಿಯಾದ ಜಿಲ್ಲೆಯ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಜಂಟಿ ಸಮೀಕ್ಷೇಯ ವರದಿಯಂತೆ ಒಟ್ಟು 3.24 ಲಕ್ಷ ಹೇಕ್ಟರ್ ಹಾನಿ ಪ್ರದೇಶದ ಕುರಿತು ಜಿಲ್ಲಾ ವಿಪತ್ತು ನಿರ್ವಾಹಣ ಪ್ರಾಧಿಕಾರ ಕಲಬುರಗಿಯಿಂದ ಸರ್ಕಾರಕ್ಕೆ ಪರಿಹಾರ ಮಂಜೂರಿಸಲು ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು.
ಸದರಿ ಪ್ರಸ್ತಾವನೆಯಂತೆ ಈಗಾಗಲೇ ಪರಿಹಾರ ತಂತ್ರಾಂಶದಲ್ಲಿ ಅರ್ಹ ರೈತರ ಹಾಗೂ ಹಾನಿ ಪ್ರದೇಶದ ಮಾಹಿತಿಯನ್ನು ಅಳವಡಿಸಲಾಗಿದಂತೆ, ಮೊದಲನೆ ಹಂತದಲ್ಲಿ ಸರಕಾರದ SDRF/NDRF ಮಾರ್ಗಸೂಚಿ ಅನ್ವಯ ಒಟ್ಟು 3,26,183 ಫಲಾನುಭವಿ ರೈತರಿಗೆ ಒಟ್ಟು 250.97 ಕೋಟಿ ಹಣ ಮಂಜೂರಾತಿ ನೀಡಲಾಗಿದ್ದು ಸದರಿ ಇನ್ ಪುಟ್ ಸಬ್ಸಿಡಿ ನೇರವಾಗಿ ಆಧಾರ ಸಂಖ್ಯೆಗೆ ಜೋಡಣೆ ಹೊಂದಿರುವ ಸಂಬಂಧಪಟ್ಟ ರೈತರ ಬ್ಯಾಂಕ್ ಖಾತೆಗಳಿಗೆ ಮುಂದಿನ ಮೂರು ನಾಲ್ಕೂ ದಿನಗಳಲ್ಲಿ ಪರಿಹಾರ ಹಣ ಜಮೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

