ದಿ.27 ರಂದು ಬೆಳಗಾವಿ ಬೃಹತ್ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಲು ಡಿ.ಕೆ.ಶಿವಕುಮಾರ್ ಮನವಿ
ನಾಗಾವಿ ಎಕ್ಸಪ್ರೆಸ್
ಬೆಳಗಾವಿ: ಎಐಸಿಸಿ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಡಿಸೆಂಬರ್ 27 ರಂದು ಬೆಳಗಾವಿಯಲ್ಲಿ ಹಮ್ಮಿಕೊಂಡಿರುವ ಬೃಹತ್ ಕಾಂಗ್ರೆಸ್ ಸಮಾವೇಶದಲ್ಲಿ ಎಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮನವಿ ಮಾಡಿದ್ದಾರೆ.
ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 26 ಡಿಸೆಂಬರ್ 1924 ರಂದು ಬೆಳಗಾವಿಯಲ್ಲಿ ನೆಡೆದ ಐತಿಹಾಸಿಕ ಎಐಸಿಸಿ ಅಧಿವೇಶನ. ಈ ಅಧಿವೇಶನಕ್ಕೆ ಕರ್ನಾಟಕದ ಇತಿಹಾಸದಲ್ಲಿ ಒಂದು ವಿಶೇಷ ಸ್ಥಾನವಿದೆ. ಸದರಿ ಅಧಿವೇಶನದ ಶತಮಾನೋತ್ಸವದ ಆಂಗವಾಗಿ ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದ ವತಿಯಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಭ್ರಮಾಚರಣೆಯ ಸವಿನೆನಪಿಗಾಗಿ ದಿ.27 ರಂದು ಬೆಳಗಾವಿಯ ಕ್ಲಬ್ ರಸ್ತೆಯ ಸಿ.ಪಿ.ಎಡ್. ಮೈದಾನದಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಸಮಾವೇಶವನ್ನು ಅರ್ಥಪೂರ್ಣಗೊಳಿಸಲು ರಾಜ್ಯದಾದ್ಯಂತ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಇದರಲ್ಲಿ ಭಾಗವಹಿಸಬೇಕಾದ ಅವಶ್ಯಕತೆ ಇರುತ್ತದೆ. ಆದುದರಿಂದ ದಯವಿಟ್ಟು ಎಲ್ಲಾ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಂಸದರು, ಕೆಪಿಸಿಸಿ ಪದಾಧಿಕಾರಿಗಳು, ಮಾಜಿ ಪದಾಧಿಕಾರಿಗಳು, ಎಐಸಿಸಿ, ಕೆಪಿಸಿಸಿ ಸದಸ್ಯರು, ಕೆಪಿಸಿಸಿ ಸಂಚಾಲಕರು, ಮಾಜಿ ಶಾಸಕರು, ಡಿಸಿಸಿ, ಬಿಸಿಸಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮುಂಚೂಣಿ ಘಟಕ, ಸೆಲ್, ವಿಭಾಗಗಳ ಎಲ್ಲ ಹಂತದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಗರ, ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಎಲ್ಲ ಸದಸ್ಯರು ಹಾಗೂ ಮಾಜಿ ಸದಸ್ಯರು, ಪಂಚಾಯಿತಿ, ವಾರ್ಡ್, ಬೂತ್ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಕೋರಿದ್ದಾರೆ.