Oplus_0

ಭಾಗೋಡಿ ಗ್ರಾಮದಲ್ಲಿ ಕೋಲಿ ಸಮಾಜದಿಂದ ದಿ.8 ರಂದು ಅಂಬಿಗರ ಚೌಡಯ್ಯನವರ ಮೂರ್ತಿ ಅನಾವರಣ, ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಂಧುಗಳು ಭಾಗವಹಿಸಲು ಮನವಿ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ತಾಲೂಕಿನ ಭಾಗೋಡಿ ಗ್ರಾಮದಲ್ಲಿ ಕೋಲಿ ಸಮಾಜದ ವತಿಯಿಂದ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಅನಾವರಣ ಸಮಾರಂಭವನ್ನು ಇದೇ ದಿ.8 ರಂದು ಬೆಳಗ್ಗೆ 10.30 ಕ್ಕೆ ಅದ್ದೂರಿಯಾಗಿ ನಡೆಯಲಿದೆ ಎಂದು ಕೋಲಿ ಸಮಾಜದ ಮುಖಂಡ ದೇವೇಂದ್ರ ನಾಟೀಕಾರ, ಭಾಗೋಡಿ ಅಧ್ಯಕ್ಷ ದೇವಿಂದ್ರ ಹಾಸಬಾ, ತಾಲೂಕು ಕಾರ್ಯದರ್ಶಿ ಶರಣು ಅರಣಕಲ್, ಯುವ ಅಧ್ಯಕ್ಷ ಮಲ್ಲಿಕಾರ್ಜುನ ಅಲ್ಲೂರಕರ್ ಅವರು ಜಂಟಿಯಾಗಿ ಹೇಳಿದರು.

ಪಟ್ಟಣದ ಅಂಬಿಗರ ಚೌಡಯ್ಯ ಸಮುದಾಯ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 12 ನೇ ಶತಮಾನದ ನಿಜಶರಣ ಅಂಬಿಗರ ಚೌಡಯ್ಯನವರ ವಚನಗಳ ಪ್ರಚಾರಕ್ಕಾಗಿ ಹಾಗೂ ಕೋಲಿ ಸಮಾಜದ ಸಂಘಟನೆಗಾಗಿ ಮತ್ತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಗ್ರಾಮದಲ್ಲಿ ಎಲ್ಲರೂ ಒಗ್ಗೂಡಿ ಮೂರ್ತಿ ಅನಾವರಣ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ, ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಂಧುಗಳು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಪೂಜ್ಯ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು ನರಸಿಪುರ, ತೊನಸನಳ್ಳಿ ಶ್ರೀ ಡಾ. ಮಲ್ಲಣ್ಣಪ್ಪ ಮಹಾಸ್ವಾಮಿಗಳು, ಗುರುಮಠಕಲ್ ಶ್ರೀ ಶಾಂತವೀರ ಗುರು ಮುರಘರಾಜೇಂದ್ರ ಮಹಾಸ್ವಾಮಿಗಳು, ಪೂಜ್ಯ  ಮಲ್ಲಿಕಾರ್ಜುನ ಮುತ್ಯಾ ಮಹಲರೋಜಾ, ಪೂಜ್ಯ ಪರಶುರಾಮ ಮುತ್ಯಾ ಭಾಗೋಡಿ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರು ಉದ್ಘಾಟಿಸುವರು, ನಿಜ ಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ ಅವರು ಧ್ವಜಾರೋಹಣ ನೆರವೇರಿಸುವರು ಎಂದು ಹೇಳಿದರು.

ಪಿಎಲ್’ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ಕೆಪಿಸಿಸಿ ಸದಸ್ಯ ನಾಗರಡ್ಡಿ ಪಾಟೀಲ ಕರದಾಳ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ ಮರಗೋಳ ಅವರು ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವರು. ಕೆಪಿಸಿಸಿ ಕಾರ್ಯದರ್ಶಿ  ರಾಜಗೋಪಾಲ ರೆಡ್ಡಿ, ರಾಜ್ಯ ಅಪೇಕ್ಸ್‌ ಬ್ಯಾಂಕ್ ನಿರ್ದೇಶಕ ಸುನೀಲ ದೊಡ್ಡಮನಿ, ಉದ್ಯಮಿ ಶಿವರಾಯ ಕಮಕನೂರ ಅವರು ಮಾತಾ ಮಾಣಿಕೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವರು. ಕೂಡು ಒಕ್ಕಲಿಗ ಸಮಾಜದ ರಾಜ್ಯಾಧ್ಯಕ್ಷ ಶಿವರಾಜ ಪಾಟೀಲ ಕಲಗುರ್ತಿ, ಕುರುಬ ಸಮಾಜದ ತಾಲೂಕು ಅಧ್ಯಕ್ಷ ಬಸವರಾಜ ಹೊಸಳ್ಳಿ, ಉದ್ಯಮಿ ಯಲ್ಲಾಲಿಂಗ ಪೂಜಾರಿ ಅವರು ದಿ.ವಿಠಲ್ ಹೇರೂರು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವರು. ರಾಯಚೂರು ಕೃಷಿ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಡಾ. ಮಹಾಂತಗೌಡ ಎಸ್. ಪಾಟೀಲ, ಅಂಬಿಗರ ಚೌಡಯ್ಯ ಜಯಂತ್ಯೋತ್ಸವ ಸಮಿತಿ ಜಿಲ್ಲಾಧ್ಯಕ್ಷ ಜಯಪ್ರಕಾಶ ಕಮಕನೂರ, ಜಿಪಂ ಮಾಜಿ ಸದಸ್ಯ ಅರವಿಂದ ಚವ್ಹಾಣ, ಕೋಲಿ ಕಬ್ಬಲಿಗ ಎಸ್.ಟಿ.ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಲಚ್ಚಪ್ಪ ಜಮಾದಾರ, ಬಿಜೆಪಿ ರಾಜ್ಯ ಹಿಂದುಳಿದ ಮೋರ್ಚಾ ಕಾರ್ಯದರ್ಶಿ ಅವ್ವಣ್ಣ ಮ್ಯಾಕೇರಿ, ಜಿಲ್ಲಾಧ್ಯಕ್ಷ ರವಿರಾಜ ಕೋರವಿ, ತಾಲೂಕು ಅಧ್ಯಕ್ಷ ಶಿವಕುಮಾರ ಯಾಗಾಪೂರ ಅವರು ಜ್ಯೋತಿ ಬೆಳಗಿಸುವರು, ಕೋಲಿ ಸಮಾಜ ಹಿರಿಯ ಮುಖಂಡ ರಾಜೇಂದ್ರಪ್ಪ ಅರಣಕಲ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕೋಲಿ ಸಮಾಜದ ಯುವ ಅಧ್ಯಕ್ಷ ರಾಜೇಶ್ ಹೊಳಿಕಟ್ಟಿ, ಮುಖಂಡರಾದ ದೇವಿಂದ್ರ ಡೋಣಗಾಂವ, ನಾಗರಾಜ ಬೆಣ್ಣೂರ, ಶರಣಪ್ಪ ಹಾಸಬಾ, ಕಾಮೇಶ್, ಸಂತೋಷ ನದಿಮುಲ್, ನಾಗರಾಜ ಹಾಸಬಾ, ಕಾಶಿನಾಥ ಭಂಗಿ ಸೇರಿದಂತೆ ಇತರರು ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!