ಡಿಸೆಂಬರ್ 1 ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಭಾಗೋಡಿ ಗ್ರಾಮ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ: ಬಸವರಾಜ ಪಾಟೀಲ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಭಾಗೋಡಿ ಗ್ರಾಮದ ಶ್ರೀ ಶಾಂತಲಿಂಗೇಶ್ವರ ಮಠದಲ್ಲಿ ಡಿಸೆಂಬರ್ 1 ರಂದು ಬೆಳಗ್ಗೆ 11 ಗಂಟೆಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಭಾಗೋಡಿ ಗ್ರಾಮ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಕಾರ್ಯದರ್ಶಿ ಬಸವರಾಜ ಪಾಟೀಲ ದಳಪತಿ ತಿಳಿಸಿದ್ದಾರೆ.
ಗುರುಮಿಠಕಲ್-ಭಾಗೋಡಿ ಖಾಸಾಮಠದ ಶ್ರೀ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು, ಮಹಾಸಭಾದ ತಾಲೂಕು ಗೌರವಾಧ್ಯಕ್ಷ ಲಿಂಗಾರೆಡ್ಡಿ ಭಾಸರೆಡ್ಡಿ ನಾಲವಾರ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಹಾಸಭಾದ ತಾಲೂಕು ಅಧ್ಯಕ್ಷ ನಾಗರಾಜ.ಸಿ.ಭಂಕಲಗಿ, ಪ್ರಧಾನ ಕಾರ್ಯದರ್ಶಿ ಆನಂದ ಪಾಟೀಲ್ ನರಬೋಳಿ, ತಾಲೂಕು ಯುವ ಅಧ್ಯಕ್ಷ ಅನೀಲಕುಮಾರ ವಡ್ಡಡಗಿ, ನಗರ ಅಧ್ಯಕ್ಷ ಚಂದ್ರಶೇಖರ ಉಟಗೂರ, ಅತಿಥಿಗಳಾಗಿ ಭಾಗೋಡಿ ಅಧ್ಯಕ್ಷ ಶರಣಬಸಪ್ಪ ಐನಾಪೂರ ಭಾಗವಹಿಸಲಿದ್ದು, ರಾಯಚೂರ ಕೃಷಿ ವಿಶ್ವವಿದ್ಯಾಲಯ ನಿವೃತ್ತ ಕುಲಪತಿ ಡಾ. ಮಹಾಂತಗೌಡ.ಎಸ್.ಪಾಟೀಲ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

