Oplus_0

ಭಾಲ್ಕಿ ಬಸವಣ್ಣನವರ ಪುತ್ಥಳಿಗೆ ಅವಮಾನಿಸಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಲು ನಮ್ಮ ಕರ್ನಾಟಕ ಸೇನೆ ಆಗ್ರಹ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಭಾಲ್ಕಿ ತಾಲೂಕಿನ ದಾಡಗಿ ಕ್ರಾಸ್ ನಲ್ಲಿರುವ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಶ್ರೀ ಬಸವೇಶ್ವರ ಅವರ ಪುತ್ಥಳಿಗೆ ಅವಮಾನಿಸಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಆಗ್ರಹಿಸಿ ಶನಿವಾರ ನಮ್ಮ ಕರ್ನಾಟಕ ಸೇನೆಯ ಮುಖಂಡರು ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ತಹಸೀಲ್ದಾರ್ ಅವರಿಗೆ ಸಲ್ಲಿಸಿದರು.

ತಾಲೂಕು ಅಧ್ಯಕ್ಷ ಸುನೀಲ್ ಗುತ್ತೇದಾರ ಮಾತನಾಡಿ, ರಾಜ್ಯದಲ್ಲಿ ಕಳೆದ ಕೆಲವು ವರ್ಷಗಳಿಂದ ಈ ತರಹದ ಘಟನೆಗಳು ಪದೇ ಪದೇ ಮರುಕಳಿಸುತ್ತಿವೆ ಈ ರೀತಿಯಾಗಿ ಸಮಾಜದಲ್ಲಿನ ಶಾಂತಿಯನ್ನು ಕದಡುವ ಕೆಲಸವನ್ನು ಮಾಡುತ್ತಿರುವ ಕಿಡಿಗೇಡಿಗಳಿಗೆ ತಕ್ಷಣವೇ ಬಂಧಿಸಿ ಕಠಿಣ ಶಿಕ್ಷೆಯನ್ನು ನೀಡಬೇಕೆಂದು ಆಗ್ರಹಿಸಿದರು.

ರಾಜ್ಯದಲ್ಲಿ ಎಲ್ಲಾ ಮಹಾಪುರುಷರ ಹಾಗೂ ಮಹಾನ್ ವ್ಯಕ್ತಿಗಳ ಪುತ್ಥಳಿ ಇದ್ದ ಸ್ಥಳದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನಮ್ಮ ಕರ್ನಾಟಕ ಸೇನೆಯ ಸಂಘಟನಾ ಸಂಚಾಲಕ ಅಂಬರೀಷ್ ಮಾಳಗಿ, ವಾಡಿ ಅಧ್ಯಕ್ಷ ಸಿದ್ದು ಪೂಜಾರಿ, ರವಿ ಗುತ್ತೇದಾರ, ಪ್ರಭಾಕರ, ವಿಶ್ವನಾಥ ಪಡಶೆಟ್ಟಿ, ರವಿಕುಮಾರ್, ಭೀಮಯ್ಯ ಗುತ್ತೇದಾರ, ಸಂತೋಷ ಪೂಜಾರಿ, ಫಯಾಜ್, ವಿರೇಶ್, ಅವಿನಾಶ್ ಗುತ್ತೇದಾರ, ಶಿವರಾಜ್, ಸಂತೋಷ ಒಡೆಯರಾಜ್ ಸೇರಿದಂತೆ ಅನೇಕರು ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!