ಭೀಮಾ ಕೋರೆಗಾಂವ್ ವಿಜಯೋತ್ಸವ, ದಲಿತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಲು ಮಹಾದೇವ ತರನಳ್ಳಿ ಮನವಿ
ನಾಗಾವಿ ಎಕ್ಸಪ್ರೆಸ್
ಶಹಾಬಾದ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಜನವರಿ 1 ರಂದು ಭೀಮಾ ಕೋರೆಗಾಂವ್ ವಿಜಯೋತ್ಸವ ಅಂಗವಾಗಿ ದಲಿತರ ಸ್ವಾಭಿಮಾನ ಜಾಗೃತಿ ದಿನ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಚಾಲಕ ಮಹಾದೇವ ತರನಳ್ಳಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಅಂದು ಸಾಯಂಕಾಲ 4.30 ಗಂಟೆಗೆ ಕಲಬುರ್ಗಿ ನಗರದ ಡಾ. ಬಾಬಾ ಸಾಹೇಬ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಬಹಿರಂಗ ಸಭೆ ನಡೆಯಲಿದೆ ಎಂದು ಹೇಳಿದರು.
ತಾಲೂಕಿನಿಂದ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಸುಮಾರು 200 ಕಾರ್ಯಕರ್ತರ ಜೊತೆಗೆ ಹಿತೈಷಿಗಳು, ಭೀಮ ಅಭಿಮಾನಿಗಳು, ಪ್ರಗತಿಪರರು ಅಂದಿನ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ ಮಾಡಿದ್ದಾರೆ.