Oplus_0

ಬಿಸಿಯೂಟದ ಶುಚಿತ್ವ–ರುಚಿ ಪರಿಶೀಲಿಸಿದ ಅಧಿಕಾರಿಗಳು |ಅಡುಗೆ ಕೋಣೆ, ಆಹಾರ ದಾಸ್ತಾನು ಹಾಗೂ ದಾಖಲೆಗಳ ಪರಿಶೀಲನೆ

ನಾಗಾವಿ ಎಕ್ಸಪ್ರೆಸ್ 

ಶಹಾಬಾದ: ನಗರದ ಶ್ರೀ ಶಿವಯೋಗಿ ಸ್ವಾಮಿ ಶಾಲೆಯಲ್ಲಿ ಮಕ್ಕಳಿಗೆ ವಿತರಿಸಲಾಗುವ ಅಕ್ಷರ ದಾಸೋಹದ ಬಿಸಿಯೂಟದ ಗುಣಮಟ್ಟ ಹಾಗೂ ಶುಚಿತ್ವವನ್ನು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶಂಕರ ಡಾಂಗೆ ಮತ್ತು ಅಧಿಕಾರಿಗಳು ಪರಿಶೀಲಿಸಿದರು.

ಮಕ್ಕಳಿಗೆ ಗುಣಮಟ್ಟದ ಹಾಗೂ ಶುಚಿಯಾದ ಆಹಾರ ಒದಗಿಸುವುದು ಪ್ರಮುಖ ಜವಾಬ್ದಾರಿಯಾಗಿದ್ದು, ಅಡುಗೆ ಸಿಬ್ಬಂದಿ ಸ್ವಚ್ಛತೆ ಮತ್ತು ಆಹಾರದ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಖಡಕ್ ಆಗಿ ಸೂಚಿಸಿದರು.

ಬಿಸಿಯೂಟವು ಸರಿಯಾಗಿ ಬೆಂದಿದೆಯೇ, ರುಚಿಕರವಾಗಿದೆಯೇ ಎಂಬುದನ್ನು ಅಧಿಕಾರಿಗಳು ಸ್ವತಃ ಆಹಾರ ಸೇವಿಸಿ ಪರೀಕ್ಷಿಸಿದರು. ಅಲ್ಲದೆ, ಅಡುಗೆ ಕೋಣೆ, ಅಡುಗೆಗೆ ಬಳಸುವ ಪಾತ್ರೆಗಳು ಹಾಗೂ ಆಹಾರ ಧಾನ್ಯಗಳನ್ನು ಸಂಗ್ರಹಿಸುವ ದಾಸ್ತಾನು ಕೊಠಡಿ ಸ್ವಚ್ಛವಾಗಿದೆಯೇ ಎಂಬುದನ್ನು ಪರಿಶೀಲಿಸಿದರು.

ಅಡುಗೆ ಸಿಬ್ಬಂದಿ, ಮುಖ್ಯ ಅಡುಗೆಯವರು ಹಾಗೂ ಸಹಾಯಕರು ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಂಡಿದ್ದಾರೆಯೇ ಎಂಬುದರ ಬಗ್ಗೆಯೂ ಅಧಿಕಾರಿಗಳು ಗಮನ ಹರಿಸಿದರು. ಮಕ್ಕಳಿಗೆ ನೀಡಲಾಗುವ ಕುಡಿಯುವ ನೀರು ಶುದ್ಧವಾಗಿದೆಯೇ ಹಾಗೂ ಸುರಕ್ಷಿತವಾಗಿ ಸಂಗ್ರಹಿಸಲಾಗಿದೆಯೇ ಎಂಬುದನ್ನು ಪರಿಶೀಲಿಸಲಾಯಿತು.

ಇದೇ ಸಂದರ್ಭದಲ್ಲಿ ಶಾಲೆಯ ಬಿಸಿಯೂಟದ ಹಾಜರಾತಿ ದಾಖಲೆ ಹಾಗೂ ಆಹಾರ ಧಾನ್ಯಗಳ ದಾಸ್ತಾನು ರಿಜಿಸ್ಟರ್‌ಗಳನ್ನು ಪರಿಶೀಲಿಸಿ, ಅವುಗಳನ್ನು ನಿಯಮಾನುಸಾರ ಸರಿಯಾಗಿ ನಿರ್ವಹಿಸಲಾಗಿದೆಯೇ ಎಂಬುದನ್ನು ಅಧಿಕಾರಿಗಳು ಖಚಿತಪಡಿಸಿಕೊಂಡರು.

ಈ ಸಂದರ್ಭದಲ್ಲಿ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಶಿವಶರಣಪ್ಪ ಮಂಠಾಳೆ, ಗಣೇಶ ಜಾಯಿ, ಶಿವಯೋಗಿ ಕಟ್ಟಿ ಸೇರಿದಂತೆ ಶಾಲೆಯ ಶಿಕ್ಷಕ ವೃಂದ ಹಾಗೂ ಬಿಸಿ ಊಟದ ಸಿಬ್ಬಂದಿ ಇದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!