ಪುರಸಭೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಅವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಸರಿಯಲ್ಲ ಕೂಡಲೇ ಕ್ಷಮೆಯಾಚಿಸಲು: ಗುಂಡು ಮತ್ತಿಮುಡ್ ಆಗ್ರಹ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಹಾಗೂ ಕಾನೂನು ಬಗ್ಗೆ ಚೂರು ಇಂಚು ಮಾಹಿತಿ ಇಲ್ಲದೆ ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಅವರ ಬಗ್ಗೆ ಪುರಸಭೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ ಹಗುರವಾಗಿ ಮಾತನಾಡಿರುವುದು ಸರಿಯಲ್ಲ ಕೂಡಲೇ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಎಸ್.ಸಿ ಮೋರ್ಚಾ ತಾಲೂಕು ಅಧ್ಯಕ್ಷ ಗುಂಡು ಮತ್ತಿಮುಡ್ ಆಗ್ರಹಿಸಿದ್ದಾರೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ರೈತರ ಮತ ಪಡೆದು ಗೆಲುವು ಸಾಧಿಸಿದ್ದಾರೆ, ಆದರೆ ನಿಮಗೆ ಚುನಾವಣೆ ಬಗ್ಗೆ ಮಾಹಿತಿ ಇಲ್ಲದೆ ನೀವು ಹಿಂಬದಿ ದಾರಿ ಹಿಡಿದು ಬಹುಮತ ಇಲ್ಲದ ಕಾರಣ ಸಚಿವ ಪ್ರಿಯಾಂಕ್ ಖರ್ಗೆ ಅವರ ಮನವೊಲಿಸಲು ಅಧಿಕಾರಿಗಳ ದುರುಪಯೋಗ ಮಾಡಿಕೊಂಡು ಚುನಾವಣೆ ತಡೆಯಾಜ್ಞೆ ತಂದಿರುವ ನಿಮ್ಮ ನಡೆ ಎಲ್ಲರಿಗೂ ಗೊತ್ತಾಗಿದೆ ಗುಪ್ತವಾಗೇನೂ ಉಳಿದಿಲ್ಲ ಎಂದು ತಿಳಿಸಿದ್ದಾರೆ.
ನಿಮಗೆ ದೈರ್ಯವಾಗಿ ಚುನಾವಣೆ ಎದುರಿಸುವುದಕ್ಕೆ ಆಗದೆ ಇರುವುದಕ್ಕೆ ವಾಮಮಾರ್ಗದಿಂದ ತಡೆಯಾಜ್ಞೆ ತಂದಿದ್ದಿರಿ, ಹೀಗಾಗಿ ರವೀಂದ್ರ ಸಜ್ಜನಶೆಟ್ಟಿ ಅವರ ಬಗ್ಗೆ ನಾಲಿಗೆ ಹರಿಬಿಟ್ಟು ಮಾತನಾಡಿರುವುದು ಸರಿಯಲ್ಲ ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಹಿನ್ನಡೆಯಾಗಿದ್ದರಿಂದ ಉದ್ದೇಶ ಪೂರ್ವಕವಾಗಿ ಕೋರ್ಟ್ ತಡೆಯಾಜ್ಞೆ ತಂದಿರುವ ನಿಮ್ಮ ನಾಯಕರ ನಡೆ ಬಗ್ಗೆ ಪ್ರಶ್ನಿಸಿ ಅದನ್ನು ಬಿಟ್ಟು ಬಿಜೆಪಿ ಅಧ್ಯಕ್ಷರ ಬಗ್ಗೆ ಹೇಳಿಕೆ ನೀಡಿದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.