Oplus_0

ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಆರ್.ರುದ್ರಯ್ಯ ಅಭಿಮತ | ಪಕ್ಷದ ಸಂಘಟನೆ ಮತ್ತಷ್ಟು ಬಲ ಪಡಿಸುವ ಪ್ರಾಮಾಣಿಕ ಪ್ರಯತ್ನ

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ಪಕ್ಷ ನೀಡಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಮೂಲಕ ಈ ಭಾಗದಲ್ಲಿ ಪಕ್ಷದ ಸಂಘಟನೆ ಮತ್ತಷ್ಟು ಬಲ ಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಆರ್.ರುದ್ರಯ್ಯ ಹೇಳಿದರು.

ರಾಜ್ಯ ಕಾರ್ಯಕಾರಣಿ ಸದಸ್ಯರಾಗಿ ಚಿತ್ತಾಪುರ ಪಟ್ಟಣಕ್ಕೆ ಮಂಗಳವಾರ ಪ್ರಥಮ ಬಾರಿಗೆ ಆಗಮಿಸಿದ ಸಂದರ್ಭದಲ್ಲಿ ನಾಗಾವಿ ಗೋಶಾಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಜಿಲ್ಲಾ ಹಾಗೂ ತಾಲೂಕು ನಾಯಕರನ್ನು ಹಾಗೂ ಮಠಾಧೀಶರನ್ನು ಭೇಟಿ ಮಾಡಿ ಸಹಕಾರ ಮತ್ತು ಆಶೀರ್ವಾದ ಪಡೆಯಲಾಗುವುದು. ಒಟ್ಟಾರೆ ಎಲ್ಲರನ್ನೂ ಜೊತೆಯಾಗಿ ತೆಗೆದುಕೊಂಡು ಹೋಗುವ ಮೂಲಕ ಪಕ್ಷದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಕಲಬುರಗಿ ಭಾಗದಲ್ಲಿ ಭಾರತೀಯ ಜನತಾ ಪಕ್ಷದ ಸಂಘಟನೆಗಾಗಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಪಕ್ಷದ ಹೈಕಮಾಂಡ್ ನನ್ನನ್ನು ರಾಜ್ಯ ಕಾರ್ಯಕಾರಣಿ ಸದಸ್ಯರನ್ನಾಗಿ ಮಾಡಿದ್ದಾರೆ. ನನ್ನ ಮೇಲೆ ವಿಶ್ವಾಸ ಇಟ್ಟು ನೀಡಿದ ಗುರುತರ ಜವಾಬ್ದಾರಿಯನ್ನು ನಿಷ್ಠೆ ಮತ್ತು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಆನಂದ ಪಾಟೀಲ ನರಿಬೋಳ, ಮಂಡಲ ಪ್ರಧಾನ ಕಾರ್ಯದರ್ಶಿ ನಾಗರಾಜ ಹೂಗಾರ, ಪುರಸಭೆ ಮಾಜಿ ಸದಸ್ಯರಾದ ರಮೇಶ್ ಬೊಮ್ಮನಳ್ಳಿ, ಮಲ್ಲಿಕಾರ್ಜುನ ಪೂಜಾರಿ, ಮುಖಂಡರಾದ ಚಂದ್ರಶೇಖರ ಉಟಗೂರ, ಶ್ರೀಕಾಂತ್ ಸುಲೇಗಾಂವ, ಅಂಬರೀಷ್ ಸುಲೇಗಾಂವ ಸೇರಿದಂತೆ ಇತರರು ಇದ್ದರು. ಇದೇ ಸಂದರ್ಭದಲ್ಲಿ ಅಂಬರೀಷ್ ಸುಲೇಗಾಂವ ಅವರು ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರ ನೀಡಿ ಅಹ್ವಾನಿಸಿದರು.

Spread the love

Leave a Reply

Your email address will not be published. Required fields are marked *

error: Content is protected !!