ಬೂತ್‌ಗಳಿಗೆ ಬಿಜೆಪಿ ಮುಖಂಡರ ಭೇಟಿ, ಮತದಾರರ ಪಟ್ಟಿ ಪರಿಷ್ಕರಣೆ ಯಶಸ್ವಿಗೊಳಿಸಲು ಕರೆ

ನಾಗಾವಿ ಎಕ್ಸಪ್ರೆಸ್ 

ವಾಡಿ: ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಅತ್ಯಂತ ಯಶಸ್ವಿಯಾಗಿ ಮತ್ತು ಸಮಯಕ್ಕೆ ಸರಿಯಾಗಿ ಮುಗಿಸುವುದು ಬೂತ್ ಅಧಿಕಾರಿಗಳಿಗೆ ಅನಿವಾರ್ಯವಾಗಿದೆ ಎಂದು ವಾಡಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಹೇಳಿದರು.

ಪಟ್ಟಣದ ವಿವಿಧ ಬೂತ್‌ಗಳಿಗೆ ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಣ್ಣೂರಕರ್ ಅವರೊಂದಿಗೆ ಕೈಗೊಂಡ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ವೀಕ್ಷಣೆ ಸಂದರ್ಭದಲ್ಲಿ ಅವರು ಮಾತನಾಡಿದರು.

ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ದೋಷಮುಕ್ತಗೊಳಿಸಿ, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವ ಜವಾಬ್ದಾರಿ ಬೂತ್ ಅಧಿಕಾರಿಗಳು ಹಾಗೂ ಪಕ್ಷಗಳ ಬೂತ್ ಪ್ರತಿನಿಧಿಗಳ ಜೊತೆಗೆ ನಮ್ಮೆಲ್ಲರ ಮೇಲಿದೆ ಎಂದು ಅವರು ತಿಳಿಸಿದರು.

ಕೆಲವರು 2002ರ ಪಟ್ಟಿಯಲ್ಲಿ ಹೆಸರಿರದ ಕಾರಣ ತಮ್ಮ ಮತದಾರರ ಚೀಟಿ ಎಲ್ಲಿ ಕೈತಪ್ಪಿ ಹೋಗುವುದೋ ಎಂಬ ಆತಂಕದಿಂದ ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಇಂತಹ ತಪ್ಪುಗಳನ್ನು ಕಡ್ಡಾಯವಾಗಿ ತಡೆಗಟ್ಟಬೇಕು. ಬೇರೆಡೆಗೆ ಸ್ಥಳಾಂತರಗೊಂಡ ಹಾಗೂ ಅನರ್ಹರ ಹೆಸರನ್ನು ನಿಯಮಾನುಸಾರ ಪಟ್ಟಿಯಿಂದ ಕೈಬಿಡಬೇಕು. ಹಾಗೆಯೇ, ಹೊಸದಾಗಿ 18 ವರ್ಷ ಪೂರ್ಣಗೊಂಡ ಅರ್ಹ ನಾಗರಿಕರ ಹೆಸರನ್ನು ಕಡ್ಡಾಯವಾಗಿ ಮತದಾರರ ಪಟ್ಟಿಗೆ ಸೇರಿಸುವಲ್ಲಿ ಬೂತ್ ಅಧಿಕಾರಿಗಳು ಹೆಚ್ಚು ಗಮನ ಹರಿಸುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲೂಕು ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಇಟಗಿ, ಚಿತ್ತಾಪುರ ನಗರ ಯುವ ಮೋರ್ಚಾ ಅಧ್ಯಕ್ಷ ಸಂಗಮೇಶ ಪಾಟೀಲ, ಹಿರಿಯ ಮುಖಂಡ ಭೀಮರಾವ ದೊರೆ, ಬೂತ್ ಪ್ರತಿನಿಧಿ ರಿಚರ್ಡ್ ಮಾರೆಡ್ಡಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!