Oplus_131072

ಛಲವಾದಿ ನಾರಾಯಣಸ್ವಾಮಿ ಜನ್ಮದಿನದ ಪ್ರಯುಕ್ತ ಬಿಜೆಪಿ ವತಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ಮಂಡಲ ವತಿಯಿಂದ ಭಾನುವಾರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಣೆ ಮಾಡಲಾಯಿತು.

ಈ ವೇಳೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರಕರ್ ಮಾತನಾಡಿ, ಛಲವಾದಿ ನಾರಾಯಣಸ್ವಾಮಿ ಅವರು ಹುಟ್ಟು ಹೋರಾಟಗಾರರು ಯಾವತ್ತೂ ಶೋಷಿತರ ಹಾಗೂ ದೀನದಲಿತರ ಪರ ಅವಿರತವಾಗಿ ಶ್ರಮಿಸುತ್ತಿದ್ದ ಮಹಾನ್ ನಾಯಕರಾಗಿದ್ದಾರೆ. ಅವರ ಹೋರಾಟ ಮತ್ತು ಸಂಘಟನಾ ಶಕ್ತಿಯನ್ನು ಪರಿಗಣಿಸಿ ಬಿಜೆಪಿ ಹೈಕಮಾಂಡ್ ವಿಧಾನ ಪರಿಷತ್ ಸದಸ್ಯರಾಗಿ ಹಾಗೂ ವಿರೋಧ ಪಕ್ಷದ ನಾಯಕರಾಗಿ ನೇಮಕ ಮಾಡಲಾಗಿದೆ. ಪ್ರಸ್ತುತ ದಲಿತರ ಪ್ರಭಾವಿ ನಾಯಕರಾಗಿ ಹೊರಹೊಮ್ಮಿದ್ದಾರೆ ಇವರ ಹೋರಾಟದ ಶಕ್ತಿ ಬಿಜೆಪಿ ಗೆ ಆನೆ ಬಲ ಬಂದಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಾಗರಾಜ ಹೂಗಾರ, ಎಸ್ಸಿ ಮೋರ್ಚಾ ಅಧ್ಯಕ್ಷ ಗುಂಡು ಮತ್ತಿಮುಡ್, ಮುಖಂಡರಾದ ಶರಣು ದಂಡೋತಿ, ಈಶ್ವರ ರಾವೂರ, ನಾಗೇಶ್ ಗಾಯಕವಾಡ, ಶಶಿ ಭಂಡಾರಿ, ಶಿವು ಮಂಗಳೂರಕರ್, ಶಿವರಾಜ್, ಮಲ್ಲಿಕಾರ್ಜುನ ಕಲ್ಮರಿ, ಸುರೇಶ್ ಬೆಳಗೋಳ ಸೇರಿದಂತೆ ಇತರರು ಇದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!