ಚನ್ನಪಟ್ಟಣ ಉಪ ಚುನಾವಣೆ ಅಖಾಡ ಸಿದ್ಧ
ಕಾಂಗ್ರೆಸ್ ನಿಂದ ಯೋಗೇಶ್ವರ್, ಮೈತ್ರಿ ಅಭ್ಯರ್ಥಿ ನಿಖಿಲ್ ಹೆಸರು ಘೋಷಣೆ
ನಾಗಾವಿ ಎಕ್ಸಪ್ರೆಸ್
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಗುರುವಾರ ನಾಮಪತ್ರ ಸಲ್ಲಿಸಿದ್ದರೆ, ಇನ್ನೊಂದೆಡೆ ಎನ್.ಡಿ.ಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರು ಬಿಜೆಪಿ ಜೆಡಿಎಸ್ ಪಕ್ಷದ ನಾಯಕರು ಘೋಷಣೆ ಮಾಡಿದ್ದು ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ.ಪಿ ಯೋಗೇಶ್ವರ್ ಯಾವಾಗ ಟಿಕೆಟ್ ಸಿಗದಿರುವ ಬಗ್ಗೆ ಖಚಿತವಾಗುತ್ತಿದ್ದಂತೆ ಅವರು ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಪ್ರಸ್ತುತ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ದಿಡೀರ್ ರಾಜಕೀಯ ಬೆಳವಣಿಗೆ ಎನ್.ಡಿ.ಎ ಕೂಟದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ನಾಯಕರಿಗೆ ತೀವ್ರ ಚಿಂತೆಗೀಡು ಮಾಡಿತ್ತು.
ಬಿಜೆಪಿ -ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಹೆಸರು ಯಾರನ್ನು ಮಾಡಬೇಕು ಎಂದು ಸುದೀರ್ಘ ಚರ್ಚೆ ನಡೆಸಿದ ನಾಯಕರು ಅಂತಿಮವಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆ ಮಾಡುವ ಮೂಲಕ ಎನ್ಡಿಎ ಅಭ್ಯರ್ಥಿ ಯಾರು-ಯಾರು ಎನ್ನುವ ಗೊಂದಲಕ್ಕೆ ತೆರಬಿದ್ದಿದೆ. ಎರಡು ಬಾರಿ ಸೋಲು ಅನುಭವಿಸಿದ ನಿಖಿಲ್ ಈ ಬಾರಿ ಗೆಲುವು ಸಾಧಿಸಲಿದ್ದಾರೆಯೇ ಎಂಬುದೇ ತೀವ್ರ ಕುತೂಹಲ ಮೂಡಿಸಿದೆ.
ಈಗ ಉಪ ಚುನಾವಣೆಯ ಅಖಾಡ ಸಿದ್ಧವಾಗಿದೆ ಇನ್ನೇನು ಮತದಾರರ ಆಯ್ಕೆ ಮೇಲಿದೆ. ಉಪ ಚುನಾವಣೆಯ ಜಯದ ಮಾಲೆ ಯಾರ ಕೊರಳಿಗೆ ಬೀಳಲಿದೆ ಎಂಬುದನ್ನು ಕಾದು ನೋಡಬೇಕಿದೆ.