ಚಿಂಚೋಳಿ ಶಾಸಕ ಡಾ.ಅವಿನಾಶ್ ಜಾಧವ್ ಕಾಣೆಯಾಗಿದ್ದು ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ: ರೈತ ಸೇನೆ ಅಧ್ಯಕ್ಷ ವೀರಣ್ಣ ಗಂಗಾಣಿ
ನಾಗಾವಿ ಎಕ್ಸಪ್ರೆಸ್
ಚಿಂಚೋಳಿ: ಮತಕ್ಷೇತ್ರದ ಶಾಸಕ ಡಾ. ಅವಿನಾಶ್ ಜಾಧವ್ ಸುಮಾರು ಮೂರು ನಾಲ್ಕು ತಿಂಗಳಿಂದ ಕಾಣೆಯಾಗಿದ್ದು, ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ ಕೊಡಲಾಗುವುದು ಎಂದು ತಾಲೂಕು ರೈತ ಸೇನೆ ಅಧ್ಯಕ್ಷ ವೀರಣ್ಣ ಗಂಗಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿಂಚೋಳಿ, ಕಾಳಗಿ, ತಾಲೂಕಿನಲ್ಲಿರುವ ಜಲ್ವಂತ ಸಮಸ್ಯೆಗಳಿವೆ ಆದರೆ ಈ ಕುರಿತು ಕ್ಯಾರೆ ಅನ್ನುತ್ತಿಲ್ಲ ಜನರ ಸಮಸ್ಯೆ, ರೈತರ ಸಮಸ್ಯೆಗಳು ಹಾಗೂ ಮೂಲಭೂತ ಸೌಕರ್ಯಗಳ ಕೊರತೆ, ಅಕ್ರಮ ಚಟುವಟಿಕೆ ಕಡಿವಾಣ ಹಾಕಬೇಕಾದ ಶಾಸಕರು ಸ್ಥಳಿಯವಾಗಿ ಸುಲಭವಾಗಿ ಸೀಗುವುದಿಲ್ಲ. ತಾಲೂಕಿನಲ್ಲಿ ಯಾವುದೇ ಕೆಲಸಗಳು ನಡೆಯುತ್ತಿಲ್ಲಾ, ಅಭಿವೃದ್ಧಿಯಲ್ಲಿ ಹಿನ್ನಡೆಯಾಗಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಬಜೆಟ್ ಅಧಿವೇಶನ ನಡೆಯುತ್ತಿದ್ದು ತಾಲೂಕಿನ ಅಭಿವೃದ್ಧಿಗೆ ಹಿನ್ನಡೆಯಾಗಿರುವಂತಹ ಸಮಸ್ಯೆಗಳನ್ನು ಕಲಾಪಗಳಲ್ಲಿ ಪ್ರಶ್ನಿಸಿ ವಿಧಾನಸಭಾ ಕ್ಷೇತ್ರದ ಜನತೆಗೆ ನೆಮ್ಮದಿಯ ಜೀವನ ಮಾಡುವಂತೆ ತಮ್ಮ ಕರ್ತವ್ಯವನ್ನು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.