ಚಿತ್ತಾಪುರ ಬಂದ್ ಪ್ರತಿಭಟನೆ ವೇಳೆ ವಿಷ ಕುಡಿಯಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತ ಸಾಬಣ್ಣ ಭರಾಟೆ, ಸರ್ಕಾರಿ ಆಸ್ಪತ್ರೆಗೆ ದಾಖಲು, ಚಿಕಿತ್ಸೆ ಮುಂದುವರಿಕೆ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಕ್ಷೇತ್ರದ ಶಾಸಕರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಅವರ ಕುಟುಂಬದವರಿಗೆ ಅವಾಚ್ಯವಾಗಿ ಹಾಗೂ ಅಶ್ಲೀಲ ಶಬ್ದಗಳಿಂದ ವೈಯಕ್ತಿಕವಾಗಿ ನಿಂದಿಸಿದ ಘಟನೆಯನ್ನು ಖಂಡಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕರೆ ನೀಡಿದ ಚಿತ್ತಾಪುರ ಬಂದ್ ಪ್ರತಿಭಟನೆಯ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ವಿಷ ಕುಡಿಯಲು ಯತ್ನಿಸಿದ ಘಟನೆ ಲಾಡ್ಜಿಂಗ್ ಕ್ರಾಸ್ ಹತ್ತಿರ ಗುರುವಾರ ನಡೆದಿದೆ.

ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಈ ಘಟನೆ ನಡೆದಿದೆ. ತಾಲೂಕಿನ ದಂಡೋತಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ಸಾಬಣ್ಣ ಭರಾಟೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ, ಈ ವೇಳೆ ಅಕ್ಕಪಕ್ಕದಲ್ಲಿ ಇದ್ದ ಕಾಂಗ್ರೆಸ್ ಮುಖಂಡರು ರಕ್ಷಣೆ ಮಾಡಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಸಾಬಣ್ಣ ಭರಾಟೆ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ದಾಖಲು ಮಾಡಿದ್ದಾರೆ ಚಿಕಿತ್ಸೆ ಮುಂದುವರಿದಿದೆ.

ಪೊಲೀಸರು ಜೀಪಿನಲ್ಲಿ ತೆಗೆದುಕೊಂಡು ಹೋಗುವಾಗಲೂ ಸಾಬಣ್ಣ ಭರಾಟೆ ಮಾತ್ರ ತನ್ನ ಪ್ರಾಣದ ಹಂಗನ್ನು ತೊರೆದು ಪ್ರಿಯಾಂಕ್ ಖರ್ಗೆ ಅವರಿಗೆ ಜಯವಾಗಲಿ ಎಂದು ಜಯಘೋಷ ಮಾತ್ರ ಕೂಗುತ್ತಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!