Oplus_0

ಚಿತ್ತಾಪುರ ಬಂದ್ ಯಶಸ್ಸಿನತ್ತ, ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ವ್ಯಾಪಾರ ವಹಿವಾಟು ಸ್ತಬ್ಧ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಕ್ಷೇತ್ರದ ಶಾಸಕರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಅವರ ಕುಟುಂಬದವರಿಗೆ ಅವಾಚ್ಯವಾಗಿ ಹಾಗೂ ಅಶ್ಲೀಲ ಶಬ್ದಗಳಿಂದ ವೈಯಕ್ತಿಕವಾಗಿ ನಿಂದಿಸಿದ ಘಟನೆಯನ್ನು ಖಂಡಿಸಿ ಬ್ಲಾಕ್ ಕಾಂಗ್ರೆಸ್ ಗುರುವಾರ ಕರೆ ನೀಡಿದ ಚಿತ್ತಾಪುರ ಬಂದ್ ಪ್ರತಿಭಟನೆ ಬೆಳಿಗ್ಗೆಯಿಂದಲೇ ಕಾಂಗ್ರೆಸ್ ಯುವ ಕಾರ್ಯಕರ್ತರು ರಸ್ತೆಗಿಳಿದು ಲಾಡ್ಜಿಂಗ್ ಕ್ರಾಸ್ ಹತ್ತಿರ ಮಾನವ ಸರಪಳಿ ನಡೆಸಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಯುವಕರು ಬೈಕ್ ರ್ಯಾಲಿ ನಡೆಸಿ ಸಚಿವ ಪ್ರಿಯಾಂಕ್ ಖರ್ಗೆ ಪರ ಜಯಘೋಷಗಳು ಮೊಳಗಿದವು.

ಶಾಲಾಕಾಲೇಜುಗಳು ಹೊರತು ಪಡಿಸಿ ಉಳಿದಂತೆ ಎಲ್ಲಾ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿದ್ದವು ವ್ಯಾಪಾರ ವಹಿವಾಟು ಸ್ತಬ್ಧವಾಗಿದ್ದರಿಂದ ರಸ್ತೆಗಳು ಬಿಕೋ ಎನ್ನುತ್ತಿದ್ದವು, ಹಾಗೂ ಸಾರಿಗೆ ಬಸ್ಸುಗಳೂ ಸಹ ರಸ್ತೆಗೆ ಇಳಿಯಲಿಲ್ಲ ಇದರಿಂದ ಪ್ರಯಾಣಿಕರು ಪರದಾಡುವಂತಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ರಮೇಶ್ ಮರಗೋಳ, ಸುನೀಲ್ ದೊಡ್ಡಮನಿ, ಮುಕ್ತಾರ್ ಪಟೇಲ್, ನಾಗಯ್ಯ ಗುತ್ತೇದಾರ ಕರದಾಳ, ಮಲ್ಲಿಕಾರ್ಜುನ ಬೆಣ್ಣೂರಕರ್, ಸಾಯಬಣ್ಣ ಕಾಶಿ, ಜಗದೀಶ್ ಚವ್ಹಾಣ, ಸಂಜಯ ಬುಳಕರ್, ದೇವು ಯಾಬಾಳ, ಹಣಮಂತ ಸಂಕನೂರ ಸೇರಿದಂತೆ ನೂರಾರು ಕಾಂಗ್ರೆಸ್ ಯುವ ಕಾರ್ಯಕರ್ತರು ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!