ಚಿತ್ತಾಪುರ ಬಸವ ಜಯಂತಿ ಉತ್ಸವದ ಬೃಹತ್ ಶೋಭಾಯಾತ್ರೆ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರದ ಪ್ರಚಾರಕ್ಕೆ ಬಸವರಾಜ ಪಾಟೀಲ ಚಾಲನೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಚಿತ್ತಾಪುರ ಹಾಗೂ ಬಸವ ಜಯಂತಿ ಉತ್ಸವ ಆಚರಣೆ ಸಮಿತಿ ವತಿಯಿಂದ ಬಸವ ಜಯಂತಿ ಉತ್ಸವ ನಿಮಿತ್ತ ಏ.20 ರಂದು ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಶೋಭಾಯಾತ್ರೆ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ಔಷಧಿ ವಿತರಣೆ ಕಾರ್ಯಕ್ರಮದ ಪ್ರಚಾರಕ್ಕೆ ಜಯಂತಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಬೆಳಗುಂಪಾ ಬುಧವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ನಾಗರಾಜ ಭಂಕಲಗಿ, ನಗರಾಧ್ಯಕ್ಷ ಚಂದ್ರಶೇಖರ ಉಟಗೂರ್, ಯುವ ಅಧ್ಯಕ್ಷ ಅನಿಲ್ ವಡ್ಡಡಗಿ, ಮುಖಂಡರಾದ ಅಶೋಕ ನಿಪ್ಪಾಣಿ, ಆನಂದ ಪಾಟೀಲ ನರಿಬೋಳ, ನೇಹಲ್ ಪಾಟೀಲ, ವಿಶ್ವಾರಾಧ್ಯ ಪಾಟೀಲ ಕರದಾಳ, ಬಸವರಾಜ ಸಂಕನೂರ, ಅಂಬರೀಷ್ ಸುಲೇಗಾಂವ, ಮಹಾದೇವ ಅಂಗಡಿ, ರಾಚಪ್ಪ ಬೊಮ್ಮನಳ್ಳಿ, ರಮೇಶ್ ಕಾಳನೂರ ಸೇರಿದಂತೆ ಇತರರು ಇದ್ದರು.

