ಚಿತ್ತಾಪುರ ಬಿಸಿಎಂ ವಸತಿ ನಿಲಯಕ್ಕೆ ಎಂಎಲ್ಸಿ ತಳವಾರ ಸಾಬಣ್ಣ ಭೇಟಿ, ವಿದ್ಯಾರ್ಥಿಗಳೊಂದಿಗೆ ಸಂವಾದ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ವಿಧಾನ ಪರಿಷತ್ ಸದಸ್ಯ ಡಾ. ತಳವಾರ ಸಾಬಣ್ಣಾ ಅವರು ಗುರುವಾರ ಭೇಟಿ ನೀಡಿ ವಸತಿ ನಿಲಯದ ಮೂಲಭೂತ ಸೌಕರ್ಯಗಳ ಬಗ್ಗೆ ವಿದ್ಯಾರ್ಥಿಗಳ ಹತ್ತಿರ ಸಂವಾದ ನಡೆಸಿದರು.
ವಸತಿ ನಿಲಯದಲ್ಲಿ ಊಟ ಮಾಡಿ ಆಹಾರದ ಗುಣಮಟ್ಟವನ್ನು ಪರಿಶೀಲನೆ ಮಾಡಿದರು. ವಸತಿ ನಿಲಯದ ಕೊಠಡಿಗಳ ನವೀಕರಣ ಕಾಮಗಾರಿ ಸಲುವಾಗಿ ವಿದ್ಯಾರ್ಥಿಗಳು ಹೊರಗೆ ಇರುವ ಪರಿಸ್ಥಿತಿ ಗಮನಿಸಿ ಹಿಂದುಳಿದ ವರ್ಗಗಳ ತಾಲೂಕಿನ ಕಲ್ಯಾಣ ಅಧಿಕಾರಿಗಳ ಹತ್ತಿರ ಮಾತನಾಡಿ ಸಮಸ್ಯೆ ಬಗೆಹರಿಸಿದರು.

