Oplus_0

ಚಿತ್ತಾಪುರ ಬಿಜೆಪಿ ಕಚೇರಿಯಲ್ಲಿ ವಾಜಪೇಯಿ ಜನ್ಮದಿನಾಚರಣೆ | ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿದ ಆದರ್ಶ ರಾಜಕಾರಣಿ: ಸಜ್ಜನಶೆಟ್ಟಿ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ದೇಶದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು 10 ಬಾರಿ ಲೋಕಸಭೆಗೆ ಹಾಗೂ 2 ಬಾರಿ ರಾಜ್ಯಸಭೆಗೆ ಆಯ್ಕೆಯಾಗಿ ಸಂಸತ್ ಸದಸ್ಯರಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿದ ಆದರ್ಶ ರಾಜಕಾರಣಿಯಾಗಿದ್ದರು ಎಂದು ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಸ್ಮರಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ನಿಮಿತ್ತ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಪ್ರಧಾನಿ ಮೊರಾರ್ಜಿ ದೇಸಾಯಿ ಅವರ ಸಂಪುಟದಲ್ಲಿ ವಿದೇಶಾಂಗ ಸಚಿವರಾಗಿ ವಿಶ್ವಸಂಸ್ಥೆಯಲ್ಲಿ ಮೊದಲ ಬಾರಿಗೆ ಹಿಂದಿಯಲ್ಲಿ ಭಾಷಣ ಮಾಡಿ ಭಾರತದ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿಸಿದ ಮಹಾನ್ ನಾಯಕ ಅಟಲ್ ಜಿ, ನಂತರ ದೇಶದ ಪ್ರಧಾನಿಯಾಗಿ ಭಾರತದ ಸರ್ವತೋಮುಖ ಅಭಿವೃದ್ಧಿಗೆ ಅಡಿಪಾಯ ಹಾಕಿದರು. ಅವರೊಬ್ಬ ಅಜಾತಶತ್ರು ಎಲ್ಲರಿಗೂ ಅಚ್ಚುಮೆಚ್ಚಿನ ರಾಜಕಾರಣಿಯಾಗಿದ್ದರು ಈಗಲೂ ಅವರ ವ್ಯಕ್ತಿತ್ವ ಹಾಗೂ ಆದರ್ಶ ಈಗಿನ ರಾಜಕಾರಣಿಗಳಿಗೆ ಪ್ರೇರಣೆಯಾಗಿದೆ ಎಂದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರಕರ್, ಪ್ರಧಾನ ಕಾರ್ಯದರ್ಶಿ ನಾಗರಾಜ ಹೂಗಾರ, ಪುರಸಭೆ ಮಾಜಿ ಸದಸ್ಯರಾದ ರಮೇಶ್ ಬೊಮ್ಮನಳ್ಳಿ, ಪ್ರಭು ಗಂಗಾಣಿ, ಮಲ್ಲಿಕಾರ್ಜುನ ಪೂಜಾರಿ, ಮುಖಂಡರಾದ ಕೋಟೇಶ್ವರ ರೇಷ್ಮಿ, ಕುನಾಲ್ ತುರೆ, ಶರಣು ಸಿದ್ರಾಮಗೋಳ, ಅಶೋಕ ದೊಡ್ಡಮನಿ, ಸಿದ್ದರಾಜ್, ಹೂಗಾರ, ಯಮನಪ್ಪ ಬೋಸಗಿ ಸೇರಿದಂತೆ ಇತರರು ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!