ಚಿತ್ತಾಪುರ ಬಿಜೆಪಿ ನಗರ ಘಟಕದ ನೂತನ ಪದಾಧಿಕಾರಿಗಳ ನೇಮಕ: ನರಿಬೋಳ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಭಾರತೀಯ ಜನತಾ ಪಾರ್ಟಿಯ ಸಂಘಟನೆಯನ್ನು ಬಲಪಡಿಸುವ ಮತ್ತು ಪಕ್ಷದ ಸಿದ್ಧಾಂತಗಳನ್ನು ತಳಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ, ಬಿಜೆಪಿ ಚಿತ್ತಾಪುರ ನಗರದ ಅಧ್ಯಕ್ಷ ಆನಂದ್ ಎಸ್. ಪಾಟೀಲ ನರಿಬೋಳ ಅವರು ಈ ಕೆಳಗಿನ ಸಕ್ರಿಯ ಕಾರ್ಯಕರ್ತರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿವಿಧ ಜವಾಬ್ದಾರಿಗಳಿಗೆ ನೇಮಕ ಮಾಡಿದ್ದಾರೆ.
ನಗರ ಪ್ರಧಾನ ಕಾರ್ಯದರ್ಶಿಯಾಗಿ ಪಂಕಜ್ ಗೌಡ್, ನಗರ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಗಮೇಶ್ ಪಾಟೀಲ್ ಸೂಲಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಭೀಮಾಶಂಕರ್ ಮಡಗಿ ಅವರನ್ನು ನೇಮಕ ಮಾಡಿ ಆದೇಶಿಸಿದ್ದಾರೆ.
ನೂತನವಾಗಿ ಜವಾಬ್ದಾರಿ ವಹಿಸಿಕೊಂಡ ಪದಾಧಿಕಾರಿಗಳು ಪಕ್ಷದ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಮತ್ತು ಅಧ್ಯಕ್ಷರ ನೇತೃತ್ವದಲ್ಲಿ ಶಿಸ್ತುಬದ್ಧವಾಗಿ ಕಾರ್ಯನಿರ್ವಹಿಸಿ, ಪಕ್ಷದ ಏಳಿಗೆಗೆ ಶ್ರಮಿಸಬೇಕೆಂದು ಸೂಚಿಸಿದ್ದಾರೆ.

