ಚಿತ್ತಾಪುರ ಬಸ್ ನಿಲ್ದಾಣದಲ್ಲಿ ಅಪರಿಚಿತ ಮೃತದೇಹ ಪತ್ತೆ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಅಪರಿಚಿತ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ ವ್ಯಕ್ತಿಗೆ 35-40 ಅಂದಾಜು ವಯಸ್ಸಾಗಿದ್ದು, ಗುರುತು ಪತ್ತೆಯಾಗಿಲ್ಲ. ಸದರಿ ವ್ಯಕ್ತಿಯ ಹೆಸರು ಮತ್ತು ವಿಳಾಸ ಪತ್ತೆಯಾಗಿರುವುದಿಲ್ಲ. ಗುರುತು ಪತ್ತೆ ಕುರಿತು ಶವವನ್ನು ಸ್ಥಳೀಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಪಿಎಸ್ಐ ಮಂಜುನಾಥ ರೆಡ್ಡಿ ತಿಳಿಸಿದ್ದಾರೆ.

ಯಾರಿಗಾದರೂ ಈ ವ್ಯಕ್ತಿಯ ಗುರುತು ಪತ್ತೆ ಆದಲ್ಲಿ ಚಿತ್ತಾಪುರ ಪೊಲೀಸ್ ಠಾಣೆಗೆ ಅಥವಾ ಪಿಎಸ್ಐ (9480803573) ಅವರಿಗೆ ಮಾಹಿತಿಯನ್ನು ನೀಡಬೇಕು ಎಂದು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!