ಚಿತ್ತಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾಗಾಂಧಿ, ಲಾಲ್ ಬಹಾದ್ದೂರ್ ಶಾಸ್ತ್ರೀ ಜಯಂತಿ ಆಚರಣೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನ ಮಂತ್ರಿ ಲಾಲ್ ಬಹಾದ್ದೂರ್ ಶಾಸ್ತ್ರೀಯವರ ಜಯಂತಿ ಆಚರಿಸಲಾಯಿತು.
ಗಾಂಧಿ ಹಾಗೂ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಅವರು ಪೂಜೆ ಸಲ್ಲಿಸಿ ಗೌರವ ನಮನಗಳು ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೃಷಿಕ ಸಮಾಜದ ಅಧ್ಯಕ್ಷ ನಾಗರೆಡ್ಡಿ ಗೋಪಸೇನ್, ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ಬುಳಕರ್, ಮುಖಂಡರಾದ ಓಂಕಾರೇಶ್ವರ್ ರೇಷ್ಮಿ, ಮಲ್ಲಿಕಾರ್ಜುನ ಸಂಗಾವಿ, ಪ್ರಭು ಹಲಕರ್ಟಿ, ನಜಿರ್ ಅಡಕಿ, ಲಕ್ಷ್ಮಿಕಾಂತ್ ಸಾಲಿ, ಕರಣು ಆಲ್ಲೂರ, ಬಸವರಾಜ್ ಕೆಬಿ, ಸಿದ್ದು ಸ್ವಾಮಿ, ಶರಣಪ್ಪ ಕೋರವಾರ ಸೇರಿದಂತೆ ಇತರರಿದ್ದರು.

