Oplus_0

ರೇವಣಸಿದ್ದಪ್ಪ ಕಾಂತಾ ಸರ್ಕಾರಿ ಡಿಗ್ರಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯುವ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಪಟ್ಟಣದ ರೇವಣಸಿದ್ದಪ್ಪ ಕಾಂತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕ ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ ಚಿತ್ತಾಪುರ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಅಡಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯುವ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಕಿಶನ್ ಬಿ ಮಾಡಲಗಿ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಪ್ರಾಚಾರ್ಯ ಡಾ. ಪದ್ಮಣ್ಣ ಎಸ್ ಪೂಜಾರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಿವಿಲ್ ನ್ಯಾಯದೀಶರು ಹಾಗೂ ಸದಸ್ಯ ಕಾರ್ಯದರ್ಶಿ ಅಭಿಷೇಕ್ ಆರ್.ಜೋಶಿ,  ಅಪಾರ ಜಿಲ್ಲಾ ಸರ್ಕಾರಿ ವಕೀಲರು ವಿ.ಆರ್ ಕಾಂತಾ, ಸಹಾಯಕ ಸರ್ಕಾರಿ ಅಭಿಯೋಜಕರು ಅಂಜನಾದೇವಿ ಆರ್, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಸೋಮಶೇಖರ್ ಡಿ ಕರದಳ್ಳಿ, ಡಾ. ಮಲ್ಲಿಕಾರ್ಜುನ್ ಬಿರಾದಾರ, ಸಂಗಪ್ಪ ವಿ.ಮಾಮನಶೆಟ್ಟಿ, ಡಾ.ಕೈಲಾಸಪತಿ ವಿಶ್ವಕರ್ಮ, ಸಿಪಿಐ ಎಸ್.ಸಿ ಪಾಟೀಲ ವೇದಿಕೆಯಲ್ಲಿದ್ದರು.

ನ್ಯಾಯವಾದಿ ಎಲ್. ಎ ಪಾಟೀಲ್ ರಾಮತೀರ್ಥ  ಅಂತಾರಾಷ್ಟ್ರೀಯ ಯುವ ದಿನ ಯುವ ಸಬಲೀಕರಣ ಕಾನೂನು ಮಾಹಿತಿ ಮತ್ತು ಸ್ವಾಮಿ ವಿವೇಕಾನಂದರ ವ್ಯಕ್ತಿತ್ವವನ್ನು ಕುರಿತು ಉಪನ್ಯಾಸ ನೀಡಿದರು. ಸೌಭಾಗ್ಯ ಮತ್ತು ಸಂಗಡಿಗರಿಂದ ಪ್ರಾರ್ಥನಾ ಗೀತೆ ಹಾಡಿದರು,  ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಡಾ. ಸಂಗಪ್ಪ ವಿ.ಮಾಮನಶೆಟ್ಟಿ ಸ್ವಾಗತಿಸಿದರು. ಡಾ. ವಿಲಾಸ್ ವಂದಿಸಿದರು. ಲಕ್ಷ್ಮಿಕಾಂತ್ ಪಾಸೋಡಿ  ರಾಷ್ಟ್ರಗೀತೆ ಹಾಡಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

Spread the love

Leave a Reply

Your email address will not be published. Required fields are marked *

You missed

error: Content is protected !!