Oplus_0

ಚಿತ್ತಾಪುರ ರೇವಣಸಿದ್ದಪ್ಪ ಕಾಂತಾ ಸರ್ಕಾರಿ ಡಿಗ್ರಿ ಕಾಲೇಜಿನಲ್ಲಿ ಅಂತರಾಷ್ಟ್ರೀಯ ರೆಡ್ ಕ್ರಾಸ್ ದಿನಾಚರಣೆ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಪಟ್ಟಣದ ರೇವಣಸಿದ್ದಪ್ಪ ಕಾಂತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ರೆಡ್ ಕ್ರಾಸ್ ದಿನಾಚರಣೆಯನ್ನು ಆಚರಿಸಲಾಯಿತು.

ಎಂ.ಬಿ ಪಾಟೀಲ ಪದವಿ ಕಾಲೇಜಿನ ಪ್ರಾಚಾರ್ಯ ಶರಣಗೌಡ ಪೊಲೀಸ್ ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರೆಡ್ ಕ್ರಾಸ್ ಬೆಳೆದು ಬಂದ ದಾರಿಯನ್ನು ವಿವರಿಸಿದರು.

ವಿಶೇಷ ಉಪನ್ಯಾಸಕರಾಗಿ ಡಾ. ಸಂಗಪ್ಪ ವಿ.ಮಾಮನಶೆಟ್ಟಿ ಮಾತನಾಡಿ, ಭಾರತೀಯ ರೆಡ್ ಕ್ರಾಸ್ ನ 7 ಪ್ರಮುಖ ತತ್ವಗಳನ್ನು ವಿವರಿಸುವುದರ ಮೂಲಕ ವಿದ್ಯಾರ್ಥಿಗಳು ಸಮಾನತೆ ಮತ್ತು ದೇಶಪ್ರೇಮ ಬೆಳೆಸುವುದರ ಜೊತೆಗೆ ಭಾರತೀಯ ರೆಡ್ ಕ್ರಾಸ್ ನ ಈ ತತ್ವಗಳನ್ನು ಮೈಗೂಡಿಸಿಕೊಳ್ಳಲು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಮಲ್ಲಿಕಾರ್ಜುನ ಬಿರಾದಾರ ಮಾತನಾಡಿ, ಭಾರತೀಯ ರೆಡ್ ಕ್ರಾಸ್ ನ ಉದ್ದೇಶಗಳು ಹಾಗೂ ಉಪಯೋಗವನ್ನು ಕುರಿತು ವಿವರಿಸಿದರು.

ಸಿಬ್ಬಂದಿ ಕಾರ್ಯದರ್ಶಿ ಶರಣಬಸಪ್ಪ ರಾಯಕೋಟಿ,  ರೋಹಿಣಿ ಕಲ್ಮಠ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಮೋನಮ್ಮ ಮತ್ತು ಸಂಗಡಿಗರು ಪ್ರಾರ್ಥನಾ ಗೀತೆ ಹಾಡಿದರು, ಭಾರತೀಯ ರೆಡ್ ಕ್ರಾಸ್ ಕಾರ್ಯಕ್ರಮ ಅಧಿಕಾರಿ ಡಾ. ಸುಗುರೇಶ್ವರ್ ಆರ್. ಮಠಪತಿ ಸ್ವಾಗತ ಕೋರಿದರು, ಡಾ.ಕೈಲಾಸಪತಿ ವಿಶ್ವಕರ್ಮ ನಿರೂಪಿಸಿದರು, ಎಸ್.ಎಸ್ ಕುಲಕರ್ಣಿ ವಂದಿಸಿದರು. ನಂತರ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳಿಸಲಾಯಿತು. ನಂತರ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉಚಿತವಾಗಿ ಬ್ರೆಡ್ ಮತ್ತು ಬಿಸ್ಕೆಟ್ ಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಎಲ್ಲಾ ಸಿಬ್ಬಂದಿ ವರ್ಗದವರು ಹಾಗೂ ಮಕ್ಕಳು ಭಾಗವಹಿಸಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!