ಚಿತ್ತಾಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ, ಬಡ ರೋಗಿಗಳಿಗೆ ಚಿಕಿತ್ಸೆ ನೀಡಲು ತಾಕೀತು
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಆಸ್ಬತ್ರೆಗೆ ಬರುವ ಬಡ ರೋಗಿಗಳಿಗೆ ಸರಿಯಾಗಿ ಸ್ಪಂದಿಸಿ ಚಿಕಿತ್ಸೆ ನೀಡಬೇಕು ಎಂದು ವೈದ್ಯರಿಗೆ ತಾಕೀತು ಮಾಡಿದರು.
ವೈದ್ಯರು ಆಸ್ಪತ್ರೆಗೆ ಸರಿಯಾದ ಸಮಯಕ್ಕೆ ಬಂದು, ರೋಗಿಗಳ ಆರೋಗ್ಯ ವಿಚಾರಿಸಬೇಕು. ಸರ್ಕಾರಿ ಆಸ್ಪತ್ರೆಗೆ ಬಡವರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ ಅವರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ನಂತರ ಆಸ್ಪತ್ರೆಯ ಪ್ರತಿಯೊಂದು ಕೋಣೆಗಳನ್ನು ವಿಕ್ಷೀಸಿದರು. ಇದೇ ಸಂದರ್ಭದಲ್ಲಿ ಬಾಣಂತಿಯರ ಕೋಣೆಗೆ ಹೋಗಿ ಬಾಣಂತಿಯರ ಜೊತೆ ಕೆಲ ಕಾಲ ಕಳೆದು ಅವರ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಜಿಪಂ ಸಿಇಓ ಭಂವ್ಹಾರಸಿಂಗ್ ಮೀನಾ, ಡಿಎಚ್ಓ ಡಾ. ಶರಣು ಕ್ಯಾತನಾಳ್, ತಹಶೀಲ್ದಾರ್ ನಾಗಯ್ಯ ಹಿರೇಮಠ, ಸಿಡಿಪಿಓ ಆರತಿ ತುಪ್ಪದ್, ತಾಲೂಕು ಆರೋಗ್ಯ ಅಧಿಕಾರಿ ಡಾ. ರಜೀವುಲ್ಲಾ ಖಾದ್ರಿ, ಆಡಳಿತ ವೈದ್ಯಾಧಿಕಾರಿ ಡಾ. ಮುಬಾಶೀರ್, ವೈದ್ಯರಾದ ಶ್ರೀಧರ ಲಾಕೆ, ಡಾ. ಖಾಜೀಂ ಅಲಿ, ಡಾ.ಪ್ರೇರಣಾ, ಡಾ. ಮಾಧುರಿ, ಡಾ. ನಸರುನ್ನಿಸಾ ಸೇರಿದಂತೆ ಇತರರು ಇದ್ದರು.