Oplus_131072

ಚಿತ್ತಾಪುರ ಸ್ಟೇಷನ್ ರಸ್ತೆಯಲ್ಲಿನ ಹೊಂಡ ಮುಚ್ಚಿ ಸಂಚಾರಕ್ಕೆ ಅನುವು ಮಾಡಿಕೊಡಲು ರವಿ ರಾಠೋಡ ಆಗ್ರಹ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಪಟ್ಟಣದ ಸ್ಟೇಷನ್ ರಸ್ತೆಯ ಅಂಬಿಗರ ಚೌಡಯ್ಯ ಸಮುದಾಯ ಭವನದ ಹತ್ತಿರದ ರಸ್ತೆ ತಿರುವಿನಲ್ಲಿ ಬಾಯಿತೆರೆದು ನಿಂತ ಹೊಂಡದಿಂದ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದ್ದು ಅನಾಹುತ ಸಂಭವಿಸುವ ಮುನ್ನ ಪುರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡು ಪರಿಹಾರೋಪಾಯ ಕ್ರಮ ಕೈಗೊಳ್ಳಬೇಕು ಎಂದು ಬಂಜಾರ ಸಮಾಜದ ಮುಖಂಡ ರವಿ ಭೀಮಾ ರಾಠೋಡ ಆಗ್ರಹಿಸಿದ್ದಾರೆ.

ಪಟ್ಟಣದ ಪ್ರಮುಖ ರಸ್ತೆ ಅದರಲ್ಲಿಯೂ ಸ್ಟೇಷನ್ ಗೆ ನಿತ್ಯ ನೂರಾರು ಪ್ರಯಾಣಿಕರು ಸಂಚಾರಿಸುವ ಹಾಗೂ ಶಾಲಾಕಾಲೇಜುಗಳು ವಿದ್ಯಾರ್ಥಿಗಳು, ದ್ವಿಚಕ್ರ ವಾಹನ ಸೇರಿದಂತೆ ಇತರೆ ವಾಹನಗಳ ಸವಾರರು ಜೀವ ಕೈಯಲ್ಲಿಟ್ಟುಕೊಂಡು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ದ್ವಿಚಕ್ರ ವಾಹನ ಸವಾರರು ಹೊಂಡದಲ್ಲಿ ಬಿದ್ದು ಸಣ್ಣಪುಟ್ಟ ಅನಾಹುತಗಳಿಗೆ ತುತ್ತಾಗಿರುವ ಉದಾಹರಣೆಗಳು ಇವೆ. ಹೀಗಾಗಿ ಕೂಡಲೇ ಬಾಯಿತೆರೆದ ನಿಂತ ಹೊಂಡವನ್ನು ಮುಚ್ಚಿ ರಸ್ತೆ ಸಮತಟ್ಟಾಗಿ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!