Oplus_0

ಚಿತ್ತಾಪುರ ಕಾಯಕ ಬಂಧುಗಳಿಗೆ ಪ್ರಮಾಣ ಪತ್ರ ವಿತರಣೆ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ:  ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಗ್ರಾಮ ಸ್ವರಾಜ್ಯ ಅಭಿಯಾನ ಹಾಗೂ ಸಹಾರಾ ಸಂಸ್ಥೆ ಸಹಯೋಗದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮೂರು ದಿನಗಳ ಪ್ರತಿ ತಂಡದಲ್ಲಿ 45 ಜನರು ಕಾಯಕ ಬಂಧುಗಳಿಗೆ (ಮೇಟ್) ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿತ್ತು .

ಗ್ರಾಮ ಸ್ವರಾಜ್ ರಾಜ್ಯ ಸಮಿತಿ ಸದಸ್ಯ ಮಸ್ತಾನ್ ಬಿರಾದಾರ ಮಾತನಾಡಿ, ಗ್ರಾಮೀಣ ಭಾಗದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆ, ವಲಸೆ ತಪ್ಪಿಸಲು ಉದ್ಯೋಗ ಸೃಷ್ಟಿ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು.

ಸಾಮೂಹಿಕ ಆಸ್ತಿಯಲ್ಲಿ ನೈಸರ್ಗಿಕ ಸಂಪನ್ಮೂಲಗಳನ್ನು ಅಭಿವೃದ್ಧಿ ಪಡಿಸಲು ಉದ್ಯೋಗ ಖಾತ್ರಿ ಯೋಜನೆಯ ಕಾಯ್ದೆಯ ಮಹತ್ವ ಪಾತ್ರ ವಹಿಸಿದೆ, ಬಡವರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಉದ್ಯೋಗ ಸೃಷ್ಟಿಸುವ ಉದ್ದೇಶವಾಗಿದೆ ಎಂದು ಹೇಳಿದರು.

ತಾಪಂ ಎಡಿ ಶ್ರೀಮಂತ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಕಾರ್ಯಕ್ರಮದಲ್ಲಿ ಕಾಯಕ ಬಂಧುಗಳು ಮತ್ತು ಮಾಸ್ಟರ್ ಟ್ರೇರನಗಳು, ತಾಲೂಕು ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!