ಚಿತ್ತಾಪುರಕ್ಕೆ ಮಾ.8 ರಂದು ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷೆ ಖರ್ಗೆ | ಡಿಸಿ ಫೌಜಿಯಾ ತರನ್ನುಮ್ ಸ್ಥಳ ಪರಿಶೀಲನೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಮಳಖೇಡ ರಸ್ತೆಯ ಸೇಂದಿ ಡಿಪೋ ಮೈದಾನದಲ್ಲಿ ಮಾ.8 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ರೂ.1,085 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಲೋಕಾರ್ಪಣೆ ಸಮಾರಂಭದ ನಿಮಿತ್ತ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಶುಕ್ರವಾರ ಸ್ಥಳ ಪರಿಶೀಲನೆ ನಡೆಸಿ ಹಾಗೂ ಪೂರ್ವ ಸಿದ್ಧತೆಯನ್ನು ಅಧಿಕಾರಿಗಳಿಂದ ಮಾಹಿತಿ ಪಡೆದರು
ಕ್ಷೇತ್ರದ ಶಾಸಕರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಮಾರಂಭಕ್ಕೆ ರಾಜ್ಯಸಭಾ ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಗಮಿಸುತ್ತಿರುವ ಪ್ರಯುಕ್ತ ಇದೊಂದು ವಿಶೇಷ ಹಾಗೂ ಅತ್ಯಂತ ಪ್ರಮುಖ ಕಾರ್ಯಕ್ರಮವಾಗಿದ್ದು, ಬೇಕಾದ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಯಾವುದೇ ಲೋಪ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಎಸ್ಸಿ ಅಡ್ಡೂರು ಶ್ರೀನಿವಾಸಲು, ಜಿಪಂ ಸಿಇಓ ಭಂವರಸಿಂಗ್ ಮೀನಾ, ಸೇಡಂ ಎಸಿ ಪ್ರಭು ರೆಡಿ, ಡಿವೈಎಸ್ಪಿ ಶಂಕರಗೌಡ ಪಾಟೀಲ, ತಹಸೀಲ್ದಾರ್ ನಾಗಯ್ಯ ಹಿರೇಮಠ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ನಂತರ ಪ್ರಜಾ ಸೌಧದ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಎಲ್ಲ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

