Oplus_0

ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು ನಾಳೆ ಚಿತ್ತಾಪುರಕ್ಕೆ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಶ್ರೀ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂ ದಕ್ಷಿಣಾಮ್ನಾಯ ಶ್ರೀ ಶಾರದಾಪೀಠಂ, ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರ ಕರಕಮಲ ಸಂಜಾತರಾದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು ಚಿತ್ತಾಪುರ ಪಟ್ಟಣಕ್ಕೆ ನಾಳೆ ಸಾಯಂಕಾಲ 4 ಗಂಟೆಗೆ ಆಗಮಿಸುತ್ತಿದ್ದಾರೆ ಎಂದು ಬ್ರಾಹ್ಮಣ ಸಮಾಜದ ತಾಲೂಕು ಅಧ್ಯಕ್ಷ ಗಿರೀಶ್ ಜಾನೀಬ್ ತಿಳಿಸಿದ್ದಾರೆ.

ಪಟ್ಟಣದ ಬ್ರಾಹ್ಮಣ ಗಲ್ಲಿಯ ಗಣೇಶ ಮಂದಿರದಲ್ಲಿ ವಿಶೇಷ ಪೂಜೆ ಸಮಾರಂಭದಲ್ಲಿ ಭಾಗಿಯಾಗಿ ಜನತೆಗೆ ದರ್ಶನ ಭಾಗ್ಯ ನೀಡಲಿದ್ದು ಹಾಗೂ ಆಶೀರ್ವಚನ ನೀಡಲಿದ್ದಾರೆ ಆದ್ದರಿಂದ ಭಕ್ತಾದಿಗಳು ಆಗಮಿಸಿ ಶ್ರೀಗಳ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ ಮಾಡಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!