Oplus_0

ಕೃಷಿಕ ಸಮಾಜದ ಕಾರ್ಯಕಾರಣಿ ಸಭೆ | ಸರ್ಕಾರ ರೈತರ ಸಾಲ ಮನ್ನಾ ಮಾಡಲು ಗೋಪಸೇನ್ ಒತ್ತಾಯ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ನಾಗರೆಡ್ಡಿ ಗೋಪಸೇನ್ ಅಧ್ಯಕ್ಷತೆಯಲ್ಲಿ  2026-27 ನೇ ಸಾಲಿನ ಮುಂಗಾರು ಹಂಗಾಮಿನ ಕೃಷಿಕ ಸಮಾಜದ ಆಡಳಿತ ಮಂಡಳಿಯ ನಿರ್ದೇಶಕರ ಕಾರ್ಯಕಾರಣಿ ಸಭೆ ನಡೆಯಿತು.

ಸಹಾಯಕ ಕೃಷಿ ನಿರ್ದೇಶಕ ಸಂಜೀವಕುಮಾರ ಮಾನಕರೆ ಮಾತನಾಡಿ, ಪ್ರಸ್ತುತ ಚಿತ್ತಾಪುರ ತಾಲೂಕಿನ ಮಳೆ, ಬೆಳೆ, ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕುರಿತು ಸಭೆಗೆ ಮಾಹಿತಿ ನಿಡಿದರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಲು ತಿಳಿಸಿದರು.

ಕೃಷಿಕ ಸಮಾಜದ ಅಧ್ಯಕ್ಷ ನಾಗರೆಡ್ಡಿ ಗೋಪಸೇನ್ ಮಾತನಾಡಿ, ಪ್ರಸ್ತುತ ಸಾಲಿನಲ್ಲಿ ಮಳೆ ಕಡಿಮೆಯಾಗಿರುವುದರಿಂದ ಹೆಚ್ಚಿನ ರೈತರಿಗೆ ತುಂತುರು ನೀರಾವರಿ ಘಟಕಗಳು ಸಿಗುವಂತೆ ಮಾಡಬೇಕು ಮತ್ತು ಸರ್ಕಾರವು ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಪ್ರತಿನಿದಿ ವೀರಣ್ಣಗೌಡ ಪರಸರೆಡ್ಡಿ ಮಾತನಾಡಿ, ಪ್ರಸ್ತುತ ಸಾಲಿನಲ್ಲಿ ಮಳೆ ಪ್ರಮಾಣ ಕಡಿಮೆ ಯಾಗಿರುವುದರಿಂದ ರೈತರು ಸಮಗ್ರ ಕೃಷಿ ಪದ್ದತಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಉಪಾಧ್ಯಕ್ಷ ಚೆನ್ನಬಸ್ಸಪ್ಪ ಜಿವಣಗಿ, ಪ್ರದಾನ ಕಾರ್ಯದರ್ಶಿ ನಿಂಗಣ್ಣಗೌಡ ಬಿರಾದಾರ, ಖಜಾಂಚಿ ನಿಂಗಣ್ಣ ಹೆಗಲೇರಿ ಮತ್ತು ನಿರ್ದೇಶಕರುಗಳಾದ ಬಾಬುರಾವ ಕಾಶಿ, ರವಿಂದ್ರ, ಶಿವಶರಣರೆಡ್ಡಿ, ಮಲ್ಲಿಕಾರ್ಜುನ, ಅಬ್ದುಲ್ ನಯಿಮ್ ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ರಾಜಕುಮಾರ, ಅರಣ್ಯ ಅಧಿಕಾರಿ ಮಹ್ಮದ್ ಜಾವೆದ್, ಪಶು ವೈದ್ಯರಾದ ಡಾ.ಆಕಾಶ ಇವರು ತಮ್ಮ ಇಲಾಖೆಗಳ ಯೋಜನೆಗಳ ಬಗ್ಗೆ ಮಾಹಿತಿ ನಿಡಿದರು. ಕೃಷಿ ಇಲಾಖೆಯ ಅಧಿಕಾರಿಗಳಾದ ಶ್ರೀನಿವಾಸ, ರವಿಂದ್ರ ಕುಮಾರ ಮತ್ತು ಬಿಟಿಎಮ್ ಸಚಿನ ಹಾಜರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!