ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಅನಾವರಣ ಪ್ರಯುಕ್ತ ಸೆ.11 ರಂದು ಪೂರ್ವಭಾವಿ ಸಭೆ: ಬಸವರಾಜ್ ಹೊಸಳ್ಳಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕಲಬುರಗಿ ನಗರದಲ್ಲಿ ಇದೇ ಸೆ.17 ರಂದು ರಾಯಣ್ಣ ಮೂರ್ತಿ ಅನಾವರಣ ಹಾಗೂ ಸಿಟಿ ಬಸ್ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ ಕಾರ್ಯಕ್ರಮದ ಪ್ರಯುಕ್ತ ಪಟ್ಟಣದ ವೆಂಕಟೇಶ್ ನಗರದ ಕನಕ ಭವನದಲ್ಲಿ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ಗುರುನಾಥ್ ಪೂಜಾರಿ ಅಧ್ಯಕ್ಷತೆಯಲ್ಲಿ ಸೆ.11 ರಂದು ಮಧ್ಯಾಹ್ನ 1 ಗಂಟೆಗೆ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಕುರುಬರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ್.ಆರ್.ಹೊಸಳ್ಳಿ ತಿಳಿಸಿದ್ದಾರೆ.
ಈ ಸಭೆಯಲ್ಲಿ ಕುರುಬ ಸಮಾಜದ ಎಲ್ಲಾ ಹಿರಿಯ ಮುಖಂಡರು ಭಾಗವಹಿಸುತ್ತಿದ್ದು, ಚಿತ್ತಾಪುರ ತಾಲೂಕಿನ ಕರ್ನಾಟಕ ಪ್ರದೇಶ ಕುರುಬ ಕುರುಬಗೊಂಡ ಸಂಘದ ಜಿಲ್ಲಾ ನಿರ್ದೇಶಕರು, ಯುವ ಘಟಕದ ಜಿಲ್ಲಾಧ್ಯಕ್ಷರು, ಮಹಿಳಾ ಘಟಕದ ಜಿಲ್ಲಾಧ್ಯಕ್ಷರು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಂಘದ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರು ಮತ್ತು ಸಮಾಜದ ಬಾಂಧವರು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪೂರ್ವಭಾವಿ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

