ಚಿತ್ತಾಪುರ ಮಹಾದೇವಮ್ಮ ಬಿ. ಪಾಟೀಲ ಮೆಮೋರಿಯಲ್ ಪಿಯು ಕಾಲೇಜಿಗೆ ಅತ್ಯುತ್ತಮ ಫಲಿತಾಂಶ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಪಟ್ಟಣದ ವಿಶ್ವಗುರು ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಶ್ರೀಮತಿ ಮಹಾದೇವಮ್ಮ ಬಿ. ಪಾಟೀಲ ಮೆಮೋರಿಯಲ್ ಪದವಿ ಪೂರ್ವ ಕಾಲೇಜು 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.94 ರಷ್ಟು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಮೈಲಿಗಲ್ಲು ಸ್ಥಾಪಿಸಿದೆ ಎಂದು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಾಗರೆಡ್ಡಿ ಪಾಟೀಲ ಕರದಾಳ ತಿಳಿಸಿದ್ದಾರೆ.

ವಾಣಿಜ್ಯ ವಿಭಾಗ: ಅರವಿಂದ್ 577 (96.16%) ಅಂಕಗಳನ್ನು ಪಡೆಯುವ ಮೂಲಕ ವಾಣಿಜ್ಯ ವಿಭಾಗಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ನಂದಿತಾ 561 (93.5%) ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಪರೀಕ್ಷೆಗೆ ಹಾಜರಾದ 62 ವಿದ್ಯಾರ್ಥಿಗಳಲ್ಲಿ 19 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ (Distinction), 31 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಮತ್ತು 01 ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ

ವಿಜ್ಞಾನ ವಿಭಾಗ: ದಿವ್ಯ 576 (96%) ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಸ್ಥಾನ ಗಳಿಸಿದ್ದರೆ, ವಿನಾಯಕ 571 (95.17%) ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಪರೀಕ್ಷೆಗೆ ಹಾಜರಾದ 132 ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ (Distinction), 82 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 16 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಅಮೋಘ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಪ್ರಾಂಶುಪಾಲರು ಹಾಗೂ ಸಮಸ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿರುವ ಅವರು, ವಿದ್ಯಾರ್ಥಿಗಳ ಮುಂದಿನ ಉನ್ನತ ಶಿಕ್ಷಣ ಮತ್ತು ಭವಿಷ್ಯದ ಹಾದಿಗೆ ಶುಭ ಹಾರೈಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!