ಚಿತ್ತಾಪುರ ತಾಲೂಕಿನಲ್ಲಿ ಮಳೆ ಹಾನಿಗೊಳಗಾದ ಗ್ರಾಮಗಳಿಗೆ ಭೇಟಿ, ಪರಿಹಾರಕ್ಕೆ ಕ್ರಮ: ಹಿರೇಮಠ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನಲ್ಲಿ ಮಂಗಳವಾರ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದ ಹಲವು ಗ್ರಾಮಗಳಲ್ಲಿ ಅಪಾರ ಪ್ರಮಾಣದ ಹಾನಿಯಾಗಿದೆ ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಮಾಹಿತಿ ನೀಡಿದ್ದಾರೆ.
ತಾಲೂಕಿನ ದಿಗ್ಗಾಂವ ಗ್ರಾಮದಲ್ಲಿ 112 ಮನೆಗಳಿಗೆ ನೀರು ನುಗ್ಗಿರುತ್ತದೆ ಮತ್ತು 50 ಕೋಳಿ ಹಾಗೂ 4 ಕುರಿಗಳು ನೀರಿನಲ್ಲಿ ಕೊಚ್ಚಿ ಹೋಗಿರುತ್ತವೆ. ಇಟಗಾ ಗ್ರಾಮದಲ್ಲಿ 13 ಮನೆಗಳಿಗೆ ನೀರು ನುಗ್ಗಿರುತ್ತದೆ. ಮೊಗಲಾ ಗ್ರಾಮದಲ್ಲಿ 34 ಮನೆಗಳಿಗೆ ನೀರು ನುಗ್ಗಿರುತ್ತದೆ ಮತ್ತು 28 ಆಡುಗಳು ನೀರಿನಲ್ಲಿ ಕೊಚ್ಚಿ ಹೋಗಿರುತ್ತವೆ. ಕದ್ದರಗಿ ಗ್ರಾಮದಲ್ಲಿ 5 ಮನೆಗಳಿಗೆ ನೀರು ನುಗ್ಗಿರುತ್ತದೆ ಮತ್ತು 2 ಕುರಿಗಳು ಮರಣ ಹೊಂದಿರುತ್ತವೆ. ಕಡಬೂರು, ರಾಜೋಳ್ಳಾ, ಅಲ್ಲೂರ್. ಬಿ ಗ್ರಾಮಗಳಲ್ಲಿ ತಲಾ ಒಂದು ಮನೆ ಭಾಗಶ ಬಿದ್ದಿರುತ್ತದೆ. ಸೂಲಹಳ್ಳಿ ಗ್ರಾಮರಲ್ಲಿ 6 ಮನೆಗಳಿಗೆ ನೀರು ನುಗ್ಗಿರುತ್ತದೆ ಎಂದು ತಿಳಿಸಿದ್ದಾರೆ.
ಮಳೆಯಿಂದ ಹಾನಿಗೊಳಗಾದ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿದ್ದು ಸರ್ಕಾರದಿಂದ ಸಿಗಬೇಕಾದ ಪರಿಹಾರ ಒದಗಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ಹೇಳಿದ್ದಾರೆ.