ಚಿತ್ತಾಪುರ ಎನ್ಇಎಸ್ ಪ್ರೌಢ ಶಾಲೆಗೆ ಶೇ.100 ಫಲಿತಾಂಶ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಎನ್ಇಎಸ್ ಪ್ರೌಢ ಶಾಲೆಗೆ 2025-26 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಬಂದಿದೆ ಎಂದು ಮುಖ್ಯಗುರು ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಪರೀಕ್ಷೆಗೆ ಹಾಜರಾದ ಎಲ್ಲಾ 69 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಡಿಸ್ಟಿಂಕ್ಷನ್ 2, ಪ್ರಥಮ ಶ್ರೇಣಿ 31, ದ್ವಿತೀಯ ಶ್ರೇಣಿ 17 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 19 ವಿದ್ಯಾರ್ಥಿಗಳು ಪಾಸಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಕೃಷ್ಣ ಭೀಮರಾಯ 557 ಶೇ.89.12, ವಿಜಯಲಕ್ಷ್ಮಿ ಬಸವರಾಜ 544 ಶೇ.87.4, ನಂದಿನಿ ಶರಣಪ್ಪ 520 ಶೇ.83.20, ರೇಣುಕಾ ಚಂದ್ರಾಮ 509 ಶೇ.81.44, ನರಸಿಂಹ ಮಹಾದೇವ 503 ಶೇ.80.48 ಅಂಕ ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ವಿಶ್ವನಾಥ ಪಾಟೀಲ ಹೆಬ್ಬಾಳ, ಕಾರ್ಯದರ್ಶಿ ಡಾ.ಚಂದ್ರಶೇಖರ ಕಾಂತಾ, ಶಾಲೆಯ ಮುಖ್ಯಗುರು ಮತ್ತು ಶಿಕ್ಷಕರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

