ಚಿತ್ತಾಪುರ ಪಶ್ಚಿಮ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ | ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಅವಂಟಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಹಿರಿಯ ನ್ಯಾಯವಾದಿ ಚಂದ್ರಶೇಖರ ಅವಂಟಿ ಹೇಳಿದರು.
ಪಟ್ಟಣದ ಶ್ರೀ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಚಿತ್ತಾಪುರ, ಸಮೂಹ ಸಂಪನ್ಮೂಲ ಕೇಂದ್ರದ ಸಹಯೋಗದಲ್ಲಿ ಮಂಗಳವಾರ ನಡೆದ ಚಿತ್ತಾಪುರ ಪಶ್ಚಿಮ 2025-26ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಾ ವಿದ್ಯಾರ್ಥಿಗಳು ಒಂದಿಲ್ಲೊಂದರಲ್ಲಿ ಪ್ರತಿಭಾವಂತರಾಗಿರುತ್ತಾರೆ ಅದನ್ನು ಶಿಕ್ಷಕರಾದವರು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಪುರಸಭೆ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಮಲ್ಲಿಕಾರ್ಜುನ ಕಾಳಗಿ, ಬಿಆರ್’ಸಿ ಮಲ್ಲಿಕಾರ್ಜುನ ಸೇಡಂ, ಸಿಆರ್’ಸಿ ಕವಿತಾ ದೊಡ್ಡಮನಿ, ಜೈಶೀಲಾ ಆಂದೋಲಾ, ಮುಖ್ಯ ಗುರುಗಳಾದ ದೇವಿಂದ್ರಪ್ಪ ಇಮಡಾಪೂರ, ಕಸ್ತೂರಿ ಪಾಟೀಲ, ವೀರಸಂಗಪ್ಪ ಸುಲೇಗಾಂವ, ನಿವೃತ್ತ ಶಿಕ್ಷಕರಾದ ದೇವಪ್ಪ ನಂದೂರಕರ್, ದೇವಿಂದ್ರಪ್ಪ ತಳವಾರ, ಶರಣಬಸಪ್ಪ ಬೊಮ್ಮನಳ್ಳಿ ಸೇರಿದಂತೆ ಇತರರು ಇದ್ದರು.

