ಚಿತ್ತಾಪುರ ಹಿರಿಯ ಪತ್ರಕರ್ತ ನಾಗಯ್ಯಸ್ವಾಮಿ ಅಲ್ಲೂರ ನಿಧನ: ಗಣ್ಯರು ಸಂತಾಪ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಅಲ್ಲೂರ (ಬಿ) ಗ್ರಾಮದ ನಿವಾಸಿ ಹಿರಿಯ ಪತ್ರಕರ್ತ, ಲೇಖಕ ನಾಗಯ್ಯಸ್ವಾಮಿ ಅಲ್ಲೂರು (55), ಶನಿವಾರ ಸಂಜೆ ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.
ಪತ್ನಿ, ಓರ್ವ ಪುತ್ರಿ, ಓರ್ವ ಪುತ್ರ ಹಾಗೂ ಚಿತ್ತಾಪುರ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸೋಹದರ ರಾಚಯ್ಯಸ್ವಾಮಿ ಅಲ್ಲೂರ ಸೇರಿದಂತೆ ಅಪಾರ ಬಂದು ಬಳಗ ಅವರು ಅಗಲಿದ್ದಾರೆ. ಅಂತ್ಯಕ್ರಿಯೆ ಅಲ್ಲೂರ (ಬಿ) ಗ್ರಾಮದ ಸ್ವಂತ ಜಮೀನಿನಲ್ಲಿ ಭಾನುವಾರ ಮದ್ಯಾಹ್ನ 2 ಗಂಟೆಗೆ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಇವರು, ಜಾನಪದ ಸಾಹಿತ್ಯ ಪರಿಷತ್, ನಾಗಾವಿ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ವಿಶ್ವ ಜನ ಸಂಸ್ಥೆಯ ಅಧ್ಯಕ್ಷರಾಗಿ ಮತ್ತು ಸಂಯುಕ್ತ ಕರ್ನಾಟಕ ಪತ್ರಿಕೆಯ ತಾಲೂಕು ವರದಿಗಾರರಾಗಿ ಸೇವೆಯಲ್ಲಿದ್ದರು ಹಾಗೂ ಅಳ್ಳೋಳ್ಳಿ ಗ್ರಾಮದಲ್ಲಿ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದಾರೆ ಈ ನಿಟ್ಟಿನಲ್ಲಿ ಇವರು ಸಾಹಿತ್ಯ ಸಾಂಸ್ಕೃತಿಕ, ಪತ್ರಿಕಾ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಸೇವೆ ಸಲ್ಲಿಸಿದ್ದಾರೆ.
ಸಂತಾಪ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಪ್ರಿಯಾಂಕ್ ಖರ್ಗೆ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಪಾಟೀಲ ಕರದಾಳ, ಬಿಜೆಪಿ ಮಂಡಲದ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನ್ ಶೆಟ್ಟಿ, ಚಿತ್ತಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಮಹೆಮೂದ ಸಾಹೇಬ್, ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ನಾಗರಾಜ ಭಂಕಲಗಿ, ಬಿಜೆಪಿ ವಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ್ ಯಡ್ರಾಮಿ, ತಾಲೂಕು ಅಧ್ಯಕ್ಷ ಸಿದ್ದರಾಜು ಮಲಕಂಡಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ, ಬಿಜೆಪಿ ಹಿರಿಯ ಮುಖಂಡ ಲಿಂಗಾರೆಡ್ಡಿಗೌಡ ಬಾಸರೆಡ್ಡಿ, ಕಾಂಗ್ರೆಸ್ ಮುಖಂಡ ವೀರಣ್ಣಗೌಡ ಪರಸರೆಡ್ಡಿ, ಹಿರಿಯ ಪತ್ರಕರ್ತ ಮಲ್ಲಿಕಾರ್ಜುನ ಮುಡಬೂಳ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ವೀರೇಂದ್ರಕುಮಾರ ಕೊಲ್ಲೂರು, ನಾಗಾವಿ ಎಕ್ಸ್ ಪ್ರೆಸ್ ದಿನಪತ್ರಿಕೆಯ ಸಂಪಾದಕ ಕಾಶೀನಾಥ ಗುತ್ತೇದಾರ ಸೇರಿದಂತೆ ಅನೇಕರು ಸ್ವಾಮಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.