ತಹಸೀಲ್ದಾರ್ ಗೆ ಮನವಿ | ಚಿತ್ತಾಪುರ ಪಟ್ಟಣಕ್ಕೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವಂತೆ ಮಹ್ಮದ್ ಇಬ್ರಾಹಿಂ ಆಗ್ರಹ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಪುರಸಭೆ ವ್ಯಾಪ್ತಿಯ 23 ವಾರ್ಡಗಳಿಗೆ ದಿನನಿತ್ಯ ಶುದ್ಧವಾದ ಕುಡಿಯುವ ನೀರು ಸರಬರಾಜು ಮಾಡಬೇಕು ಎಂದು ಹೊಂಗೀರಣ ತಾಲೂಕಾ ಹಿರಿಯ ನಾಗರಿಕ ನಾಗರಿಕಿಯರ ಹಾಗೂ ವಯೋವೃದ್ಧರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಹ್ಮದ್ ಇಬ್ರಾಹಿಂ ಆಗ್ರಹಿಸಿದರು.
ಜಿಲ್ಲಾಧಿಕಾರಿಗೆ ಬೆರದ ಮನವಿ ಪತ್ರವನ್ನು ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಶನಿವಾರ ಸಲ್ಲಿಸಿ, ನಂತರ ಮಾತನಾಡಿದ ಅವರು, ಚಿತ್ತಾಪುರ ಪಟ್ಟಣಕ್ಕೆ ಕಳೆದ ವರ್ಷದಿಂದ ಶುದ್ಧವಾದ ಕುಡಿಯುವ ನೀರು ಸಮರ್ಪಕವಾಗಿ ಸರಬರಾಜು ಆಗುತ್ತಿಲ್ಲ ಹಾಗೂ ದಿನ ಬಿಟ್ಟು ದಿನ ನೀರು ಬಿಡಲಾಗುತ್ತಿದೆ. ಬಿಟ್ಟರು ಬರಿ 20 ರಿಂದ 30 ನಿಮಿಷಗಳು ಮಾತ್ರ, ಹಾಗೂ ಸಮಯಕ್ಕೆ ಸರಿಯಾಗಿ ನೀರು ಬೀಡದೆ ತಮ್ಮ ಮನಸ್ಸಿಗೆ ಬಂದಂತೆ ಬಿಡುತ್ತಾರೆ ಇದರಿಂದ ನೀರಿಗಾಗಿ ಸಾರ್ವಜನಿಕರು ಪರದಾಡುತ್ತಿದ್ದಾರೆ ಎಂದು ಹೇಳಿದರು.
ಚಿತ್ತಾಪುರ ಪಟ್ಟಣಕ್ಕೆ ಶುದ್ಧವಾದ ಕುಡಿಯುವ ನೀರು ಸರಬರಾಜು ಮಾಡುತ್ತೇವೆ ಎಂದು ಹೇಳಿದ ಪುರಸಭೆಯವರು ಅಶುದ್ಧ ನೀರು ಸರಬರಾಜು ಮಾಡುತ್ತಿದ್ದಾರೆ. ಇದರಿಂದ ಪಟ್ಟಣದಲ್ಲಿ ವಾಂತಿ ಭೇದಿಯಂತಹ ಸಾಂಕ್ರಮಿಕ ರೋಗಗಳಿಗೆ ಜನರು ತುತ್ತಾಗುತ್ತಿದ್ದಾರೆ ಇಷ್ಟಾದರೂ ಸಂಬಂದಪಟ್ಟ ಇಲಾಖೆಯವರು ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು.
ವಾರ್ಡ್ ನಂ.2 ವ್ಯಾಪ್ತಿಯ ಕಾಶಿ ಗಲ್ಲಿಯಲ್ಲಿ ನಿಗದಿತ ಸಮಯಕ್ಕೆ ನೀರು ಬರುತ್ತಿಲ್ಲ, ಈ ಕುರಿತು ಹಲವು ಬಾರಿ ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೆ ಪ್ರಯೋಜನವಾಗಿಲ್ಲ. ಅಲ್ಲದೆ ಅಧಿಕಾರಿಗಳಿಗೆ ಪೋನ್ ಕಾಲ್ ಮಾಡಿದಾಗ ಕಾಲ್ ರಿಸೀವ್ ಮಾಡುತ್ತಿಲ್ಲ ಹಾಗೂ ಅಧಿಕಾರಿಗಳು ಒಬ್ಬರ ಮೇಲೊಬ್ಬರು ಹಾಕುತ್ತಾ ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆ. ಈಗಾಗಲೇ ಬೇಸಿಗೆ ಕಾಲ ಮುಗಿಯುತ್ತಿದ್ದರೂ ಜನರಿಗೆ ಮಾತ್ರ ಕುಡಿಯುವ ನೀರಿನ ಬಾಗ್ಯ ಕಲ್ಪಸುವಲ್ಲಿ ಪುರಸಭೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಬೇಜವಾಬ್ದಾರಿ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ಕೈಗೊಂಡು ಚಿತ್ತಾಪುರ ಪಟ್ಟಣಕ್ಕೆ ಶುದ್ಧವಾದ ಕುಡಿಯುವ ನೀರು ಸರಬರಾಜು ಮಾಡುವ ಕ್ರಮ ಕೈಗೊಳ್ಳಬೇಕು ಎಂದು ಮಹ್ಮದ್ ಇಬ್ರಾಹಿಂ ಒತ್ತಾಯಿಸಿದರು. ಮನವಿ ಪತ್ರ ಸ್ವೀಕರಿಸಿದ ತಹಸೀಲ್ದಾರ್ ನಾಗಯ್ಯ ಹಿರೇಮಠ ಮಾತನಾಡಿ, ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಡಿಎಸ್ಎಸ್ ಮುಖಂಡ ದೇವಿಂದ್ರ ಕುಮಸಿ, ಮಲ್ಲಿನಾಥ ಪಾಟೀಲ, ಸಿದ್ರಾಮ ಕಾಶಿ, ಮಹಿಮೂದ ಸಾಬ್, ಮಲ್ಲಿಕಾರ್ಜುನ ಮುಗುಳಕರ್, ಚಂದ್ರಕಾಂತ ಕಾಶಿ, ಕಲ್ಯಾಣಪ್ಪ ಪೂಜಾರಿ, ಅಂಬಾದಾಸ ಟೇಲರ್ ಸೇರಿದಂತೆ ಇತರರು ಇದ್ದರು.

