ಚಿತ್ತಾಪುರ ಪ್ರಾರ್ಥನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಸ್ತು ಪ್ರದರ್ಶನ, ಪಠ್ಯೇತರ ಚಟುವಟಿಕೆಗಳು ಮಕ್ಕಳ ಸರ್ವಾಂಗಿಣ ಅಭಿವೃದ್ಧಿಗೆ ಸಹಾಯಕ: ಸಿಸ್ಟರ್ ಸಿಂಪ್ರೋಸ್
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಶೈಕ್ಷಣಿಕ ಕಾಲಾವಧಿಯಲ್ಲಿ ಶಿಕ್ಷಕರು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಕೈಗೊಂಡಾಗ ಮಕ್ಕಳ ಸರ್ವಾಂಗಿಣ ಅಭಿವೃದ್ಧಿಗೆ ಸಹಾಯಕವಾಗುತ್ತವೆ ಎಂದು ಶಿಶುವಿಹಾರ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಸಿಸ್ಟರ್ ಸಿಂಪ್ರೋಸ್ ಹೇಳಿದರು.
ಪಟ್ಟಣದ ಪ್ರಾರ್ಥನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಒಂದಿಲ್ಲೊಂದು ಪ್ರತಿಭೆ ಇದ್ದೇ ಇರುತ್ತದೆ ಅದನ್ನು ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಿ ಆ ಪ್ರತಿಭೆಯನ್ನು ಹೊರತರುವ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಪುರಸಭೆಯ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಚಂದ್ರಶೇಖರ ಕಾಶಿ ಮಾತನಾಡಿ, ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಪ್ರಮುಖ ಇರುತ್ತದೆ, ಅಂತ ಕಾರ್ಯವನ್ನು ಪಟ್ಟಣದ ಪ್ರಾರ್ಥನಾ ಶಾಲೆಯು ಮಾಡುತ್ತಿದೆ ಎಂದು ಹೇಳಿದರು.
ಓರಿಯಂಟ್ ಸಿಮೆಂಟ್ ಕಂಪನಿಯ ಸಹಾಯಕ ವ್ಯವಸ್ಥಾಪಕಿ ಲತಾ ರಾಠೋಡ ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಪಠ್ಯೇತರ ಚಟುವಟಿಕೆಗಳು ಬಹುಮುಖ್ಯವಾಗಿರುತ್ತವೆ ಅವುಗಳು ಜೀವನಪೂರ್ತಿ ನೆನಪಿನಲ್ಲಿರುತ್ತವೆ ಎಂದು ಹೇಳಿದರು.
ಶಾಲೆಯ ಅಧ್ಯಕ್ಷ ಜಗದೇವ ದಿಗ್ಗಾಂವಕರ್, ಶಿಕ್ಷಕ ವಿಶ್ವರಾಜ್ ಟೋನಿ, ಶಿಕ್ಷಕಿಯರಾದ ಶಮೀಮ್, ರೋಸ್ ಮೇರಿ, ಲಲಿತಾ ರಾಠೋಡ, ನಿರ್ಮಲಾ, ಶೈಲಜಾ ರಾಯ್, ಪ್ರೀತಿ, ಕಾವ್ಯ, ವಿಜಯಲಕ್ಷ್ಮಿ, ಸಂಜನಾ ಮಠಪತಿ ಸೇರಿದಂತೆ ಶಾಲೆಯ ಪಾಲಕರು ಇದ್ದರು.