Oplus_0

ಪ್ರಾರ್ಥನಾ ಶಾಲೆಯ ಏಳನೇ ವಾರ್ಷಿಕೋತ್ಸವ, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪಾಲಕರ ಹಾಗೂ ಶಿಕ್ಷಕರ ಪಾತ್ರ ಬಹಳ ಪ್ರಮುಖ: ನಾಗರೆಡ್ಡಿ ಪಾಟೀಲ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪಾಲಕರ ಹಾಗೂ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದೆ ಎಂದು ಕೆಪಿಸಿಸಿ ಸದಸ್ಯ ವಿಶ್ವಗುರು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಾಗರೆಡ್ಡಿ ಪಾಟೀಲ ಕರದಾಳ ಹೇಳಿದರು.

ಪಟ್ಟಣದ ಬಜಾಜ್ ಕಲ್ಯಾಣ ಮಂಟಪದ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರಾರ್ಥನಾ ಪೂರ್ವ ಪ್ರಾಥಮಿಕ ಶಾಲೆ ಮತ್ತು ವೀರಭದ್ರೇಶ್ವರ ಹಿರಿಯ ಪ್ರಾಥಮಿಕ ಶಾಲೆಯ 7ನೇ ವಾರ್ಷಿಕೋತ್ಸವದ ಮಕ್ಕಳ ಉತ್ಸವ-2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪಾಲಕರಾದವರು ಮಕ್ಕಳಿಗೆ ಬರೀ ಶಾಲೆಗೆ ದಾಖಲಾತಿ ಮಾಡಿದರೆ ಸಾಲದು ಆಗಾಗ ಶಾಲೆಗೆ ಭೇಟಿ ನೀಡಿ ಮಕ್ಕಳ ಶಿಕ್ಷಣದ ಬಗ್ಗೆ ಮಾಹಿತಿ ಪಡೆಯಬೇಕು ಹಾಗೂ ನಿತ್ಯ ಮಕ್ಕಳ ಕಡೆ ಗಮನ ಹರಿಸಬೇಕು ಎಂದು ಕಿವಿಮಾತು ಹೇಳಿದರು.

ಕಲಿಕೆ ಎನ್ನುವುದು ನಿಂತ ನೀರಾಗಬಾರದು ಹರಿಯುವ ನೀರಾಗಬೇಕು. ಶಾಲೆಯಲ್ಲಿ ಶಿಕ್ಷಕರು ಮನೆಯಲ್ಲಿ ಪಾಲಕರು ತಮ್ಮ ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿದರೆ ಮಕ್ಕಳು ಖಂಡಿತವಾಗಿಯೂ ವಿದ್ಯಾವಂತರಾಗುತ್ತಾರೆ ಎಂದರು.

ಕಂಬಳೇಶ್ವರ ಸಂಸ್ಥಾನ ಮಠದ ಶ್ರೀ ಸೋಮಶೇಖರ ಶಿವಾಚಾರ್ಯರು ಮಾತನಾಡಿ, ಪಟ್ಟಣದಲ್ಲಿ ಚಿಕ್ಕ ವಯಸ್ಸಿನಲ್ಲೇ ಶಿಕ್ಷಣ ಸಂಸ್ಥೆ ಹುಟ್ಟುಹಾಕಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಜಗದೇವ ದಿಗ್ಗಾಂವಕರ್ ಅವರ ಸೇವೆ ಮತ್ತು ಕಾಳಜಿ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು

ಮುಖ್ಯ ಅತಿಥಿಯಾಗಿದ್ದ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣಾ ಸಾಲಿ, ಕ್ಷೇತ್ರ ಸಮನ್ವಯಾಧಿಕಾರಿ ಮಲ್ಲಿಕಾರ್ಜುನ ಸೇಡಂ ಮಾತನಾಡಿದರು. ಸಾನಿಧ್ಯ ವಹಿಸಿದ್ದ ನಾಲವಾರದ ಕೋರಿಸಿದ್ದೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಡಾ‌.ಸಿದ್ಧತೋಟೇಂದ್ರ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.

ಪ್ರಾರ್ಥನಾ ಶಾಲೆಯ ಅಧ್ಯಕ್ಷ ಜಗದೇವ ದಿಗ್ಗಾಂವಕರ್ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಸದಸ್ಯ ಜಗದೀಶ ಚವ್ಹಾಣ, ಬಿಜೆಪಿ ಮುಖಂಡ ಗೋಪಾಲ ರಾಠೋಡ ಅತಿಥಿಗಳಾಗಿ ವೇದಿಕೆಯಲ್ಲಿದ್ದರು. ಶಾಲೆಯ ಶಿಕ್ಷಕಿಯರಾದ ಶಮೀಮ್, ರೋಜ್ ಮೇರಿ, ಲಲಿತಾ ರಾಠೋಡ್, ನಿರ್ಮಲಾ, ಪ್ರೀತಿ, ಕಾವ್ಯ ಮಾರಡಗಿ, ವಿಜಯಲಕ್ಷ್ಮಿ, ಸಂಜನಾ ಮಠಪತಿ, ಮುಖಂಡರಾದ ನಾಗರಾಜ ರೇಷ್ಮೆ, ವೀರಣ್ಣಾ ಸುಲ್ತಾನಪುರ, ಪ್ರಸಾದ ಅವಂಟಿ, ವಿಶ್ವರಾಜ ಕರದಾಳ, ರವಿ ಸರಡಗಿ, ಅಶೋಕ ಚವ್ಹಾಣ, ಶಿವುಗೌಡ ಮಾಲಿಪಾಟೀಲ್, ನಾಜೀಮ್ ಪಟೇಲ್ ಹಾಜರಿದ್ದರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Spread the love

Leave a Reply

Your email address will not be published. Required fields are marked *

error: Content is protected !!