ರೈತರು ಕಡ್ಡಾಯವಾಗಿ ಎಫ್ಐಡಿ ಮಾಡಿಸಿ: ಶಾಮರಾಯ ಸಂಗಾವಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ರೈತ ಬಾಂಧವರು ಇತ್ತೀಚೆಗೆ ಜಮೀನು ಖರೀದಿ, ವಿಭಾಗ, ಪೋಟಿ ಮತ್ತು ಪಾವತಿ ಜಮೀನುಗಳಿಗೆ ಸಂಬಂಧಿಸಿದಂತೆ ರೈತರು ಕಡ್ಡಾಯವಾಗಿ ಎಫ್ಐಡಿ ಸಂಖ್ಯೆಯನ್ನು ನಮೂದಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ (ಕೂಡಿಹಳ್ಳಿ ಚಂದ್ರಶೇಖರ್ ಬಣ) ತಾಲೂಕು ಅಧ್ಯಕ್ಷ ಶಾಮರಾಯ ಸಂಗಾವಿ ದಿಗ್ಗಾಂವ ತಿಳಿಸಿದ್ದಾರೆ.
ತಪ್ಪಿದಲ್ಲಿ ಅಂತಹ ರೈತರಿಗೆ ಮುಂದಿನ ದಿನಗಳಲ್ಲಿ ಬೆಳೆವಿಮೆ ಬೆಳೆವಿಮೆ ಪರಿಹಾರ ಹಾಗೂ ಇನ್ನಿತರ ಕೃಷಿ ಇಲಾಖೆಯ ಸಹಾಯದಿಂದ ವಂಚಿತರಾಗಬೇಕಾಗುತ್ತದೆ, ಹೀಗಾಗಿ ಈ ಕೂಡಲೇ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಎಫ್ಐಡಿ ಮಾಡಿಸಿಕೊಳ್ಳಬೇಕು ಈ ಕುರಿತು ಕೃಷಿ ಇಲಾಖೆಯ ಅಧಿಕಾರಿಗಳು ಈಗಾಗಲೇ ಪ್ರಕಟಿಸಿದ್ದಾರೆ ಎಂದು ತಿಳಿಸಿದ್ದಾರೆ.

