ಚಿತ್ತಾಪುರ: ಸಾಕು ನಾಯಿಗಳಿಗೆ ಉಚಿತವಾಗಿ ರೇಬಿಸ್ ಲಸಿಕೆ ಯೋಜನೆಯ ಸದುಪಯೋಗ ಪಡಿಸಿಕೊಳ್ಳಲು ಕರೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನಲ್ಲಿ ಅಕ್ಟೋಬರ್ 21 ರಿಂದ ನವೆಂಬರ್ 20 ರವರಿಗೆ ಜಾನುವಾರುಗಳಿಗೆ ಕಾಲುಬಾಯಿ ರೋಗದ ಲಸಿಕೆ ಜೊತೆಯಲ್ಲಿ, ಸಾಕು ನಾಯಿಗಳಿಗೆ ಉಚಿತವಾಗಿ ರೇಬಿಸ್ ಲಸಿಕೆ ಹಾಕಲಾಗುವುದು ಆದ್ದರಿಂದ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪಶುಪಾಲನಾ ಇಲಾಖೆಯ ಮುಖ್ಯ ಪಶುವೈದ್ಯಧಿಕಾರಿ ಡಾ. ಶಂಕರ್ ಎಸ್. ಕಣ್ಣೆ ಕರೆ ನೀಡಿದ್ದಾರೆ.
ಲಸಿಕಾ ಕಾರ್ಯಕ್ರಮಕ್ಕಾಗಿ ತಾಲೂಕಿನಲ್ಲಿ ಒಟ್ಟು 35 ಜನ ಪಶುಪಾಲನಾ ಇಲಾಖೆ, ಸಿಬ್ಬಂದಿಯು ನೀಲಿ ಬಣ್ಣದ ಡ್ರೆಸ್ ಧರಿಸಿ ಪ್ರತಿ ಗ್ರಾಮಗಳಲ್ಲಿ ಜಾನುವಾರುಗಳಿಗೆ ಮತ್ತು ನಾಯಿಗಳಿಗೆ ಲಸಿಕೆ ಹಾಕುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ತಿಳಿಸಿದ್ದಾರೆ.
ರೇಬಿಸ್ ರೋಗ ತಡೆಗಟ್ಟಲು ಲಸಿಕೆ ಹಾಕುವುದು ಮಾತ್ರ ಏಕೈಕ ಮಾರ್ಗವಾಗಿದ್ದು ಕಾರಣ ಚಿತ್ತಾಪುರ ಪಟ್ಟಣ ಸೇರಿದಂತೆ ಎಲ್ಲ ಗ್ರಾಮಗಳಲ್ಲಿ ಸಾಕು ನಾಯಿಗಳಿಗೆ ಲಸಿಕೆ ಹಾಕಿಸಿ ರೇಬಿಸ್ ರೋಗದಿಂದ ಮುಕ್ತಗೊಳಿಸಬೇಕು ಎಂದು ಕೋರಿದ್ದಾರೆ.