ಚಿತ್ತಾಪುರ ಮರಳು ಟಾಸ್ಕ್ ಫೋರ್ಸ್ ಸಮಿತಿ ಸಭೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕು ಪಂಚಾಯತ ಸಭಾಂಗಣದಲ್ಲಿ ಗುರುವಾರ ಸೇಡಂ ಸಹಾಯಕ ಆಯುಕ್ತ ಪ್ರಭುರೆಡ್ಡಿ ಅಧ್ಯಕ್ಷತೆಯಲ್ಲಿ ಮರಳು ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಿತು.
ವಿವಿಧ ಇಲಾಖೆಯ ಅಧಿಕಾರಿಗಳು ಒಳಗೊಂಡ ತಂಡಕ್ಕೆ ಅಕ್ರಮ ಮರಳು ಸಾಗಾಣಿಕೆ ಮತ್ತು ದಾಸ್ತಾನು ತಡೆಗಟ್ಟಲು ಸದರಿ ಸಭೆಯಲ್ಲಿ ಸಹಾಯಕ ಆಯುಕ್ತರು ಸೂಚಿಸಿದರು.
ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ, ತಹಸೀಲ್ದಾರ ನಾಗಯ್ಯ ಹಿರೇಮಠ, ಚಿತ್ತಾಪುರ ವೃತ್ತ ನಿರೀಕ್ಷಕ ಚಂದ್ರಶೇಖರ ತಿಗಡಿ, ಪಿಎಸ್ಐ ಶ್ರೀಶೈಲ್ ಅಂಬಾಟಿ, ಕೃಷಿ ಸಹಾಯಕ ನಿರ್ದೇಶಕ ಸಂಜೀವಕುಮಾರ ಮಾನಕರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು ಭಾಗವಹಿಸಿದ್ದರು.