Oplus_0

ಡಾ.ಶರಣಬಸವಪ್ಪ ಅಪ್ಪ ನಿಧನ ಹಿನ್ನೆಲೆ ಧ್ವಜಾರೋಹಣಕ್ಕೆ ಸೀಮಿತವಾದ ಸ್ವಾತಂತ್ರ್ಯ ದಿನಾಚರಣೆ | ವೇದಿಕೆ, ಸಾಂಸ್ಕೃತಿಕ ಕಾರ್ಯಕ್ರಮ ರದ್ದು 

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ಕಲಬುರಗಿ ಶ್ರೀ ಶರಣಬಸವೇಶ್ವರ ಮಹಾದಾಸೋಹ ಸಂಸ್ಥಾನದ ಎಂಟನೇ ಪೀಠಾಧಿಪತಿ ಪೂಜ್ಯ ಶ್ರೀ ಡಾ.ಶರಣಬಸವಪ್ಪ ಅಪ್ಪ ಅವರು ಲಿಂಗೈಕ್ಯರಾದ ಹಿನ್ನೆಲೆ ಸ್ವಾತಂತ್ರ್ಯ ದಿನಾಚರಣೆ ಬರಿ  ಧ್ವಜಾರೋಹಣಕ್ಕೆ ಸೀಮಿತವಾಯಿತು. ವೇದಿಕೆ, ಸಾಂಸ್ಕೃತಿಕ ಕಾರ್ಯಕ್ರಮ ರದ್ದುಗೊಳಿಸಲಾಯಿತು.

ಪ್ರಜಾ ಸೌಧ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರು ರಾಷ್ಟ್ರಪೀತ ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್ ಅಂಬೇಡ್ಕ‌ರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು. ನಂತರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ಮಾತನಾಡಿದ ತಹಶೀಲ್ದಾರ್, ಡಾ.ಶರಣಬಸವಪ್ಪ ಅಪ್ಪ ಅವರು ಲಿಂಗೈಕ್ಯರಾದ ಪ್ರಯುಕ್ತ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭವನ್ನು ರದ್ದುಗೊಳಿಸಿ ಸರಳವಾಗಿ ಆಚರಿಸಲಾಗುತ್ತದೆ ಎಂದು ಹೇಳಿದರು.

ಪಶು ಸಂಗೋಪನಾ ಇಲಾಖೆಯ ಅಧಿಕಾರಿ ಡಾ.ಶಂಕರ ಕಣ್ಣಿ ಮಾತನಾಡಿ, ಪ್ರಜಾ ಸೌಧ ಉದ್ಘಾಟನೆಯಾದ ಬಳಿಕ ಪ್ರಥಮ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಸಿದ್ಧತೆಗಳನ್ನು ಹಾಗೂ ತಯ್ಯಾರಿ ಮಾಡಿಕೊಳ್ಳಲಾಗಿತ್ತು ಆದರೆ ಡಾ.ಶರಣಬಸವಪ್ಪ ಅಪ್ಪ ಅವರು ನಿಧನರಾದ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳು ರದ್ದು ಮಾಡಲಾಗಿದೆ. ಸರ್ಕಾರಿ ನೌಕರರು, ವಿದ್ಯಾರ್ಥಿಗಳಿಗೆ ವಿವಿಧ ಸನ್ಮಾನ ಪುರಸ್ಕಾರ, ಬಹುಮಾನ ವಿತರಣೆ ಸೇರಿದಂತೆ ಸಿದ್ದತೆ ಮಾಡಿಕೊಂಡ ಎಲ್ಲಾ ಕಾರ್ಯಕ್ರಮಗಳು ಬರುವ ಸೆಪ್ಟೆಂಬರ್ 17 ರಂದು ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಇದೇ ವೇಳೆ ಪಿಎಸ್ಐ ಶ್ರೀಶೈಲ್ ಅಂಬಾಟಿ ಅವರ ನೇತೃತ್ವದಲ್ಲಿ ಪೊಲೀಸ್ ಕವಾಯತು ನಡೆಸಿ ಗೌರವ ವಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ರಾಜಕುಮಾರ್, ಮರತೂರಕರ್ ತಾಪಂ ಇಒ ಮಹ್ಮದ್ ಅಕ್ರಂ ಪಾಶಾ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ, ಪಿಎಲ್’ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ಸಮಾಜ ಕಲ್ಯಾಣಾಧಿಕಾರಿ ಚೇತನ್ ಗುರಿಕಾರ, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ, ಅರಣ್ಯಾಧಿಕಾರಿ ವಿಜಯಕುಮಾರ್ ಬಡಿಗೇರ್, ಅಬಕಾರಿ ಪಿಎಸ್ಐ ವನಿತಾ, ಕೃಷಿ ಅಧಿಕಾರಿ ಸಂಜೀವಕುಮಾರ ಮಾನಕರ್, ಪಿಡ್ಬ್ಲುಡಿ ಎಇಇ ಮೊಹಮ್ಮದ್ ಇಸ್ಮಾಯಿಲ್, ಶಿವಶರಣಪ್ಪ ಮಂಠಾಳೆ, ಮಲ್ಲಿಕಾರ್ಜುನ ಸೇಡಂ, ಅಶ್ವಥ್ ನಾರಾಯಣ, ವಿಠಲ್ ರಾವ್, ರಾಜಣ್ಣ ಕರದಾಳ, ರೇವಣಸಿದ್ದಪ್ಪ ರೋಣದ್, ಸತ್ಯನಾರಾಯಣ ಯಾದವ್, ರವಿ ಇವಣಿ, ಭೀಮರಾಯ ಹೊತಿನಮಡಿ, ನರಹರಿ ಕುಲಕರ್ಣಿ, ರಾಜು ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಅನೇಕ ಮುಖಂಡರು, ಶಿಕ್ಷಕರು ಹಾಗೂ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಇದ್ದರು. ಸಂತೋಷ್ ಶಿರನಾಳ ನಿರೂಪಿಸಿದರು.

Spread the love

Leave a Reply

Your email address will not be published. Required fields are marked *

error: Content is protected !!