Oplus_0

ಚಿತ್ತಾಪುರ ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಶೇ.100 ಫಲಿತಾಂಶ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಪಟ್ಟಣದ ನಾಗಾವಿ ಕ್ಯಾಂಪಸ್ ನ ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ (ಆರ್.ಎಂ.ಎಸ್.ಎ) 2025-26 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಬಂದಿದೆ ಎಂದು ಮುಖ್ಯಗುರು ಸಂತೋಷಕುಮಾರ ಜಮಾದಾರ್ ತಿಳಿಸಿದ್ದಾರೆ.

ಪರೀಕ್ಷೆಗೆ ಹಾಜರಾದ ಎಲ್ಲಾ 62 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ನಿತಿನ್ ಕೆ 596 ಶೇ.95.36, ನಂದೀಶ್ 584 ಶೇ.93.44, ರೇವಣ್ಣಸಿದ್ದಪ್ಪ 570 ಶೇ.91.12, ಮಹೇಶ್ 569 ಶೇ.91.02, ಅಶ್ವಿನಿ ಮಲಿಕಾರ್ಜುನ 557 ಶೇ.89.12, ವಿದ್ಯಾಶ್ರೀ 555 ಶೇ.88.08 ಅಂಕ ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯಗುರು, ಶಿಕ್ಷಕರು ಹಾಗೂ ಎಸ್ಡಿಎಂಸಿ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!