ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ನಾಗಾವಿ ಕ್ಯಾಂಪಸ್ ನ ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ 6ನೇ ತರಗತಿಯ ಪ್ರವೇಶ ಪರೀಕ್ಷೆಗಾಗಿ ಆನ್ಲೈನ್ ನಲ್ಲಿ ಅರ್ಜಿ ಕರೆಯಲಾಗಿದೆ ಎಂದು ಮುಖ್ಯಗುರು ಸಂತೋಷಕುಮಾರ ಜಮಾದಾರ್ ತಿಳಿಸಿದ್ದಾರೆ.
ತಾಲೂಕಿನ ಐದನೇ ತರಗತಿ ಓದುತ್ತಿರುವ ಸರ್ಕಾರಿ ಅನುದಾನಿತ ಅನುದಾನ ರಹಿತ ಶಾಲೆಗಳ ಮುಖ್ಯ ಶಿಕ್ಷಕರು ವಿಶೇಷ ಗಮನಹರಿಸಿ ಎಲ್ಲಾ ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆಗೆ ಹಾಜರುಪಡಿಸುವ ಹಾಗೆ ನೋಡಿಕೊಳ್ಳಲು ಕೋರಿದ್ದಾರೆ..
ಅರ್ಜಿ ಸಲ್ಲಿಸುವ ಜನವರಿ 23 ರಿಂದ ಫೆಬ್ರವರಿ 25 ರವರೆಗೆ ನಿಗದಿಪಡಿಸಲಾಗಿದೆ ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಆದರ್ಶ ವಿದ್ಯಾಲಯ ಮುಖ್ಯಗುರು ಸಂತೋಷ ಕುಮಾರ ಇವರನ್ನು ಸಂಪರ್ಕಿಸಲು ತಿಳಿಸಿದೆ ದೂರವಾಣಿ ಸಂಖ್ಯೆ :9972775538 ಸಹ ಶಿಕ್ಷಕರು ಹಣಮಂತ 99011 60764, ಜನ್ನತ್ ಮೇಡಂ 89706 40484, ಶಿವರಾಜ 99002 93543, ಜಯಲಕ್ಷ್ಮ 80887 52224 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಸರ್ಕಾರಿ ಆದರ್ಶ ವಿದ್ಯಾಲಯ 2026-27 ನೇ ಸಾಲಿನ 6 ನೇ ತರಗತಿಯ ಪ್ರವೇಶ ಪರೀಕ್ಷೆಗಾಗಿ ONLINE www.vidyavahini.schooleducationನಲ್ಲಿ ಅರ್ಜಿ ಕರೆಯಲಾಗಿದೆ. ಚಿತ್ತಾಪುರ ತಾಲೂಕಿನ ಸರಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ಐದನೇ ತರಗತಿಯಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಜನವರಿ 23 ರಿಂದ ಫೆಬ್ರವರಿ 25 ವರೆಗೆ ಕಾಲಾವಕಾಶ ನೀಡಲಾಗಿದೆ. ಪ್ರವೇಶ ಪರೀಕ್ಷೆ ಮಾರ್ಚ್ 15 ರಂದು ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

